
ಎಬಿಜಿಪಿ ಮೈಸೂರು ಜಿಲ್ಲಾ ಉಪಾಧ್ಯಕ್ಷರಾಗಿ ವಿಕ್ರಂ ಅಯ್ಯಂಗಾರ್ ನೇಮಕ…
- TV10 Kannada Exclusive
- July 21, 2025
- No Comment
- 101
ಮೈಸೂರು,ಜು21,Tv10 ಕನ್ನಡ

ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಜಿಲ್ಲಾ ಉಪಾಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್ ನೇಮಕಗೊಂಡಿದ್ದಾರೆ. ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಎಬಿಜಿಪಿ ಜಿಲ್ಲಾ ಅಭ್ಯಾಸ ವರ್ಗದಲ್ಲಿ ವಿಕ್ರಂ ಅಯ್ಯಂಗಾರ್ ರವರಿಗೆ ನೇಮಕ ಪತ್ರವನ್ನು ಕರ್ನಾಟಕ ಪ್ರಾಂತ ಅಧ್ಯಕ್ಷರಾದ ನರಸಿಂಹ ನಕ್ಷತ್ರಿ ರವರು ಪತ್ರ ನೀಡಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಪ್ರಾಂತದ ಕಾರ್ಯದರ್ಶಿ ಗಾಯಿತ್ರಿ ನಾಡಿಗ್, ವನವಾಸಿ ಕಲ್ಯಾಣ ಪ್ರಾಂತದ ಕೋಶಾಧ್ಯಕ್ಷ ಉಮೇಶ್ ಪ್ರಸಾದ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್, ಮೈಸೂರು ಘಟಕದ ಅಧ್ಯಕ್ಷರಾದ ಸಿ ಎಸ್ ಚಂದ್ರಶೇಖರ್, ಕಾರ್ಯದರ್ಶಿ ಶ್ರೀಕಂಠೇಶ್, ಹಾಗೂ ಇನ್ನಿತರರು ಹಾಜರಿದ್ದರು..