ಗಾಂಜಾ ವ್ಯಸನಿಗಳ ವಿರುದ್ದ ಮೇಟಗಳ್ಳಿ ಠಾಣಾ ಪೊಲೀಸರ ಸಮರ…ಕಾರ್ಯಾಚರಣೆಗೆ ಕತ್ತಲು ಅಡ್ಡಿ…ಕೆಟ್ಟು ನಿಂತ ಬೀದಿ ದೀಪಗಳು…ಕಣ್ಮುಚ್ಚಿ ಕುಳಿತ ಪಾಲಿಕೆ ಅಧಿಕಾರಿಗಳು…

ಗಾಂಜಾ ವ್ಯಸನಿಗಳ ವಿರುದ್ದ ಮೇಟಗಳ್ಳಿ ಠಾಣಾ ಪೊಲೀಸರ ಸಮರ…ಕಾರ್ಯಾಚರಣೆಗೆ ಕತ್ತಲು ಅಡ್ಡಿ…ಕೆಟ್ಟು ನಿಂತ ಬೀದಿ ದೀಪಗಳು…ಕಣ್ಮುಚ್ಚಿ ಕುಳಿತ ಪಾಲಿಕೆ ಅಧಿಕಾರಿಗಳು…

ಮೈಸೂರು,ಜು25,Tv10 ಕನ್ನಡ

ಗಾಂಜಾ ವ್ಯಸನಿಗಳ ವಿರುದ್ದ ಮೇಟಗಳ್ಳಿ ಠಾಣಾ ಪೊಲೀಸರು ಸಮರ ಸಾರಿದ್ದಾರೆ.ಮೇಟಗಳ್ಳಿಯ ಸ್ಮಶಾನದಲ್ಲಿ ಗಾಂಜಾ ವ್ಯಸನಿಗಳ ಕಾಟಕ್ಕೆ ಬ್ರೇಕ್ ಹಾಕಲು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಆದ್ರೆ ಪೊಲೀಸರ ಕಾರ್ಯಾಚರಣೆಗೆ ನಗರ ಪಾಲಿಕೆ ಅಧಿಕಾರಿಗಳು ಸ್ಪಂದಿಸದಿರುವುದು ವಿಷಾಧನೀಯ.ಇಂದು ಸ್ಮಶಾನದಲ್ಲಿ ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ.ಇನ್ಸ್ಪೆಕ್ಟರ್ ಅರುಣ್ ರವರು ತಡಮಾಡದೆ ತಮ್ಮ ಸಿಬ್ಬಂದಿಗಳ ಸಮೇತ ಸ್ಮಶಾನಕ್ಕೆ ಎಂಟ್ರಿ ಕೊಟ್ಟಿದ್ದಾರೆ.ಆದ್ರೆ ದಾಳಿ ನಡೆಸಿದ ಸಮಯದಲ್ಲಿ ಬೀದಿ ದೀಪಗಳು ಕೆಟ್ಟುನಿಂತ ಪರಿಣಾಮ ಕಾರ್ಯಾಚರಣೆಗೆ ಅಡ್ಡಿಯಾಗಿದೆ.ಗಾಂಜಾ ವ್ಯಸನಿಗಳು ಕತ್ತಲೆಯಲ್ಲೇ ಪರಾರಿಯಾಗಿದ್ದಾರೆ.ಸ್ಮಶಾನದಲ್ಲಿ ಯುವಕರು ಗುಂಪು ಕಟ್ಟಿಕೊಂಡು ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿ ಭಯದ ವಾತಾವರಣ ಮೂಡಿಸುತ್ತಿದ್ದಾರೆ ಇದರಿಂದ ಕಾನೂನು ಬಾಹಿರ ಚಟುವಟಿಕೆಗಳು ನಡೆಯುವ ಸಾಧ್ಯತೆ ಇರುತ್ತದೆ ಹೀಗಾಗಿ ಬೀದಿ ದೀಪಗಳನ್ನ ಸರಿಪಡಿಸುವಂತೆ ಮೇಟಗಳ್ಳಿ ಠಾಣೆ ನಿರೀಕ್ಷಕರು ಫೆಬ್ರವರಿ ತಿಂಗಳಿನಲ್ಲೇ ವಲಯ ಕಚೇರಿ 5 ಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.ಪೊಲೀಸರ ಮನವಿ ಪತ್ರಕ್ಕೆ ಕ್ಯಾರೆ ಎನ್ನದ ಪಾಲಿಕೆ ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ.ಪೊಲೀಸರ ಕಾರ್ಯಚರಣೆಗೆ ಪಾಲಿಕೆ ಅಧಿಕಾರಿಗಳೇ ಸ್ಪಂದಿಸದಿದ್ದಲ್ಲಿ ಗಾಂಜಾ ವ್ಯಸನಿಗಳ ಕಾಟ ತಪ್ಪಿಸುವುದು ಹೇಗೆ ಎಂಬ ಪ್ರಶ್ನೆ ಸ್ಥಳೀಯರದ್ದು.ಸಧ್ಯ ಸ್ಮಶಾನ ಶವಗಳ ಅಂತ್ಯಕ್ರಿಯೆಗಿಂತ ಹೆಚ್ಚಾಗಿ ಗಾಂಜಾ ವ್ಯಸನಿಗಳ ತಾಣವಾಗುತ್ತಿದೆ.ಮೃದೇಹಗಳ ಅಂತ್ಯಕ್ರಿಯೆಗೆ ಬರುವ ಜನರಿಗಂತೂ ಗಾಂಜಾ ವ್ಯಸನಿಗಳ ವರ್ತನೆ ತೀವ್ರ ಮುಜುಗರಕ್ಕೆ ಕಾರಣವಾಗುತ್ತಿದೆ.ಗಾಂಜಾ ವ್ಯಸನಿಗಳ ಕಾಟಕ್ಕೆ ಬ್ರೇಕ್ ಹಾಕಬೇಕಿದ್ದಲ್ಲಿ ಪಾಲಿಕೆ ಅಧಿಕಾರಿಗಳು ಸಹ ಪೊಲೀಸರ ಜೊತೆ ಕೈ ಜೋಡಿಸಬೇಕಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *