
ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ…ಭಾರಿ ಪ್ರಮಾಣದ ಎಂಡಿಎಂಎ ವಶಕ್ಕೆ…
- TV10 Kannada Exclusive
- July 27, 2025
- No Comment
- 310
ಮೈಸೂರು,ಜು26,Tv10 ಕನ್ನಡ
ಮಾದಕ ವಸ್ತು ತಯಾರಿಕ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿ ಭಾರಿ ಪ್ರಮಾಣದ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ.ಮೈಸೂರಿನ ಹೊರವಲಯದ ರಿಂಗ್ ರಸ್ತೆ ಬಳಿ ರಹಸ್ಯವಾಗಿ ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ನಡೆಸಲಾಗಿದೆ.50 ಕೆಜಿಗೂ ಹೆಚ್ಚು ಎಂಡಿಎಂಎ ವಶಕ್ಕೆ ಪಡೆದಿದ್ದಾರೆಂದು ಹೇಳಲಾಗಿದೆ.ಮಹಾರಾಷ್ಟ್ರದಿಂದ ಬಂದ ಮಾದಕವಸ್ತು ನಿಯಂತ್ರಣಾ ಘಟಕದ ಅಧಿಕಾರಿಗಳು ಮೈಸೂರು ಎನ್.ಆರ್.ಠಾಣಾ ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಕೋಟ್ಯಾಂತರ ಬೆಲೆಯ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.
ಮಹಾರಾಷ್ಟ್ರ ಸೇರಿ ದೇಶ ವಿದೇಶಗಳಿಗೆ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ.ಮೈಸೂರಿನ ಇತಿಹಾಸದಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತು ದೊರೆತಿರಲಿಲ್ಲವೆಂದು ಹೇಳಲಾಗಿದೆ.ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ…