
ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಎಫೆಕ್ಟ್…ಗಾಂಜಾ ವಿರುದ್ದ ಮೈಸೂರಿನಲ್ಲಿ ಮಿಡ್ ನೈಟ್ ಕಾರ್ಯಾಚರಣೆ…ಖುದ್ದು ಫೀಲ್ಡ್ ಗೆ ಇಳಿದ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್…
- CrimeTV10 Kannada Exclusive
- July 28, 2025
- No Comment
- 1007


ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಎಫೆಕ್ಟ್…ಗಾಂಜಾ ವಿರುದ್ದ ಮೈಸೂರಿನಲ್ಲಿ ಮಿಡ್ ನೈಟ್ ಕಾರ್ಯಾಚರಣೆ…ಖುದ್ದು ಫೀಲ್ಡ್ ಗೆ ಇಳಿದ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್…

ಮೈಸೂರು,ಜು28,Tv10 ಕನ್ನಡ

ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾದ ಹಿನ್ನಲೆ
ಪ್ರಕರಣವನ್ನು ಮೈಸೂರು ಖಾಕಿಪಡೆ ಗಂಭೀರವಾಗಿ ಪರಿಗಣಿಸಿದೆ.ನೆನ್ನೆ ಮೈಸೂರು ನಗರದಾದ್ಯಂತ ದಿಢೀರ್ ಕಾರ್ಯಾಚರಣೆ ನಡೆದಿದೆ. ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಖುದ್ದಾಗಿ ಫೀಲ್ಡ್ ಗೆ ಇಳಿದಿದ್ದಾರೆ

ನೆನ್ನೆ ರಾತ್ರಿ ಮಂಡಿ ಮೊಹಲ್ಲಾ ಠಾಣಾ ವ್ಯಾಪ್ತಿಯಲ್ಲಿ ಮಿಡ್ ನೈಟ್ ಕಾರ್ಯಾಚರಣೆ ನಡೆದಿದೆ. ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ
26 ಜನ ಗಾಂಜಾ ಸೇವಿಸಿದವರು ಪತ್ತೆಯಾಗಿದ್ದು
ಒಬ್ಬ ಮಾರಾಟಗಾರನನ್ನು ವಶಕ್ಕೆ ಪಡೆದಿದ್ದಾರೆ.
ಮಂಡಿ ಮೊಹಲ್ಲಾ, ಉದಯಗಿರಿ, ಎನ್ ಆರ್ ಮೊಹಲ್ಲಾ, ನಜರ್ ಬಾದ್, ಕೆ ಆರ್ ಮೊಹಲ್ಲಾ ಸೇರಿ ಹಲವು ಕಡೆ ಏಕ ಕಾಲಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ
ಡಿಸಿಪಿಗಳು ಎಸಿಪಿಗಳು ಇನ್ಸ್‌ಪೆಕ್ಟರ್ ಸಬ್ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.59 ಗೋದಾಮುಗಳ ಪರಿಶೀಲನೆ ಮಾಡಲಾಗಿದೆ.
ಹಾಸ್ಟೆಲ್‌ಗಳು ಸೇರಿ ಹಲವು ಕಡೆ ತಪಾಸಣೆ ಮಾಡಿದ್ದಾರೆ.
ಈ ಹಿಂದೆ ಗಾಂಜಾ ಮಾರಾಟ ಮಾಡುತ್ತಿದ್ದ
35 ಜನರ ವಿಚಾರಣೆ ನಡೆಸಿದ್ದಾರೆ.
ಇಂದು ಸಹಾ ಕಾರ್ಯಾಚರಣೆ ಮುಂದುವರಿಯಲಿದೆ…

