
ಕೌಟುಂಬಿಕ ಕಲಹ ಹಿನ್ನಲೆ…ಪೊಲೀಸ್ ಪೇದೆ ನೇಣಿಗೆ ಶರಣು…
- TV10 Kannada Exclusive
- July 28, 2025
- No Comment
- 88
ನಂಜನಗೂಡು,ಜು28,Tv10 ಕನ್ನಡ
ಕೌಟುಂಬಿಕ ಕಲಹ ಹಿನ್ನೆಲೆ ಮನನೊಂದು ಪೊಲೀಸ್ ಪೇದೆ ನೇಣಿಗೆ ಶರಣಾದ ಘಟನೆ
ನಂಜನಗೂಡಿನ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ.ಬೀರೇಶ್ (37) ಮೃತ ದುರ್ದೈವಿ. ಗುಂಡ್ಲುಪೇಟೆ ತಾಲೂಕಿನ
ಮೈಸೂರು ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಮುಖ್ಯಪೇದೆ ಕಾರ್ಯನಿರ್ವಹಿಸುತ್ತಿದ್ದರು. ಚಿಕ್ಕಾಟಿ ಗ್ರಾಮದ ನಿವಾಸಿಯಾಗಿರುವ ಬೀರೇಶ್ ತನ್ನ ಪತ್ನಿ ಹಾಗೂ ಮಗುವಿನೊಂದಿಗೆ ನಂಜನಗೂಡಿನ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ವಾಸವಿದ್ದರು.ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ಕೊಠಡಿಯ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವೀಂದ್ರ, ಪಿಎಸ್ಐ ಕೃಷ್ಣಕಾಂತ ಕೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ…