ಸಿಂಗರಶೆಟ್ಟಿ ಕೊಳ ಪುನರುಜ್ಜೀವನಗೊಳಿಸಿ…ಬಿಜೆಪಿ ಕಾರ್ಯಕರ್ತರ ಆಗ್ರಹ…ಎರಡು ಸಮುದಾಯ ಮುಖಂಡರ ನಡುವೆ ಮಾತಿನ ಚಕಮಕಿ…

ಸಿಂಗರಶೆಟ್ಟಿ ಕೊಳ ಪುನರುಜ್ಜೀವನಗೊಳಿಸಿ…ಬಿಜೆಪಿ ಕಾರ್ಯಕರ್ತರ ಆಗ್ರಹ…ಎರಡು ಸಮುದಾಯ ಮುಖಂಡರ ನಡುವೆ ಮಾತಿನ ಚಕಮಕಿ…

ಮೈಸೂರು,ಆ6,Tv10 ಕನ್ನಡ

ಮೈಸೂರಿನ ರಾಜೇಂದ್ರನಗರದ ಮುಖ್ಯರಸ್ತೆಯಲ್ಲಿರುವ ನೂರಾರು ವರ್ಷಗಳ ಇತಿಹಾಸವಿರುವ ಸಿಂಗರಶೆಟ್ಟಿ ಕಲ್ಯಾಣಿಯನ್ನ ಸದವಚ್ಛಗೊಳಿಸಿ ಪುನರುಜ್ಜೀವನಗೊಳಿಸುವಂತೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.ಸದರಿ ಸ್ಥಳವನ್ನ ಮುಚ್ಚಲಾಗಿದೆ.ಇಲ್ಲಿ ಅನಧಿಕೃತವಾಗಿ ಶೆಡ್ ಗಳನ್ನ ನಿರ್ಮಿಸಲಾಗಿದೆ.ಸುತ್ತಮುತ್ತ ಮಾಂಸ ಹಾಗೂ ಮೀನಿನ ಅಂಗಡಿಗಳನ್ನ ತೆರೆದು ಅಪವಿತ್ರಗೊಳಿಸಲಾಗಿದೆ.ಮಂಟಪ ಮತ್ತು ಕಲ್ಯಾಣಿಯನ್ನ ಸ್ವಚ್ಛಗೊಳಿಸಬೇಕಿದೆ.ಈ ಕುರಿತಂತೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾರ್ಯಕರ್ತರ ಒತ್ತಾಯವಾಗಿದೆ.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಗಿರಿಧರ್ ರವರ ನೇತೃತ್ವದಲ್ಲಿ ಸುಮಾರು 25 ಜನ ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸುವ ವೇಳೆ ಕೆಲವು ಸ್ಥಳೀಯರು ಮಾತಿನ ಚಕಮಕಿಗೆ ಇಳಿದಿದ್ದಾರೆ.
ಈ ವೇಳೆ ಗಿರಿಧರ್ ಮಾತನಾಡಿ ಇಲ್ಲಿಂದ ದೇವರ ಪೂಜೆಗೆಂದು
ಶಿವಾಜಿ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನಕ್ಕೆ ನೀರು ತೆಗೆದುಕೊಂಡು ಹೋಗುತ್ತಿದ್ದರು. ಈಗ ಕೊಳವನ್ನು ಮುಚ್ಚಿ ಮಂಟಪದ ಸುತ್ತ ಮುತ್ತ ಮೀನು ಮತ್ತು ಮಾಂಸದ ಅಂಗಡಿಗಳನ್ನು ಅನಧಿಕೃತವಾಗಿ ಇಟ್ಟು ಅದನ್ನು ಅಪವಿತ್ರಗೊಳಿಸಲಾಗುತ್ತಿದೆ. ಈ ಭಾಗದಲ್ಲಿ ರಜಪೂತರು ಹಾಗೂ ಮರಾಠ ಸಮಾಜದ ಜನರು ಹೆಚ್ಚು ವಾಸವಾಗಿದ್ದು. ಮತ್ತು ದೇವರಿಗೆ ಸಂಬಂದ ಪಟ್ಟಂತ ಮಂಟಪಕ್ಕೆ ಮತ್ತು ಹಿಂದುಗಳ ಭಾವನೆಗೆ ಧಕ್ಕೆ ಆಗುತಿದೆ. ಆ ಮಂಟಪದ ಸುತ್ತ ಮುತ್ತ ಇರುವ ಅಂಗಡಿಗಳನ್ನು ಖಾಲಿ ಮಾಡಿಸಿ. ಹಿಂದುಗಳ ಪವಿತ್ರವಾಗಿರು ಮಂಟಪವನ್ನು ಸ್ವಚ್ಚಗೋಳಿಸಬೇಕು ಆಗ್ರಹಿಸಿದರು.ಇಲ್ಲದಿದ್ದಲ್ಲಿ ಮುಂದಿನ ವಾರ ಸ್ಥಳದ ಬಳಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.ಈಗಾಗಲೇ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದೇವೆ ಆದ್ದರಿಂದ ಸದರಿ ಸ್ಥಳವನ್ನು ಪರಿಶೀಲನೆ ಮಾಡಲು ಬಂದಿದ್ದೆವು ಆದರೆ ಸ್ಥಳೀಯ ಜನರು ವಿರೋಧ ಮಾಡಿದ್ದಾರೆ. ಇದು ನಮ್ಮ ಅಸ್ಮಿತೆ ಈ ಜಾಗವನ್ನು ಪುನರುಜ್ಜೀವನ ಮಾಡಿ ಪೂಜೆ ಪುನಸ್ಕಾರ ಆಗಬೇಕು ಎಂದು ಆಗ್ರಹಿಸಿದರು.
ಈ ವೇಳೆ ಬಿಜೆಪಿ ಮೈಸೂರು ನಗರ ನರಸಿಂಹರಾಜ ಕ್ಷೇತ್ರದ ಅಧ್ಯಕ್ಷರಾದ ಮಂಜುನಾಥ್ , ಮುಖಂಡರಾದ ಮುರುಳಿ , ಕಾರ್ತಿಕ್ ಮರಿಯಪ್ಪ, ಪುನೀತ್,ಲಕ್ಷ್ಮಣ್ ,ಮಣಿರತ್ನಂ, ಕೃಷ್ಣಮೂರ್ತಿ ರಾವತ್ ಜಗದೀಶ್ ,ಶಾಂತರಾಜ್,ತಂಬಿ,ಮಹದೇವು,ವೇಲು,ನಾಗರಾಜ್ ,ಜಗದೀಶ್ ,ನವೀನ್ ಶೆಟ್ಟಿ ಸಮಾಜದ ಮುಖಂಡರು ಹಾಜರಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *