ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಯಜುರುಪಾಕರ್ಮ…ಸಾಮೂಹಿಕ ಯಜ್ಞೋಪವೀತ ಬದಲಾವಣೆ…

ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಯಜುರುಪಾಕರ್ಮ…ಸಾಮೂಹಿಕ ಯಜ್ಞೋಪವೀತ ಬದಲಾವಣೆ…

ಮೈಸೂರು,ಆ9,Tv10 ಕನ್ನಡ

ಮೈಸೂರಿನ ವಿಜಯನಗರದ ಶ್ರೀ ಯೋಗಾನರಸಿಂಹ ದೇವಾಲಯದಲ್ಲಿ ಸಾಮೂಹಿಕವಾಗಿ ಋಗ್ವೇದ ಹಾಗೂ ಯಜುರುಪಾಕರ್ಮ ಕಾರ್ಯಕ್ರಮ ನೆರವೇರಿತು.ನೂರಾರು ವಿಪ್ರರು ಭಾಗವಹಿಸಿ ಜನಿವಾರ ಬದಲಾಯಿಸಿಕೊಂಡರು.
ದೇವಸ್ಥಾನದ ಆಡಳಿತಾಧಿಕಾರಿ ಎನ್ ಶ್ರೀನಿವಾಸನ್ ನೇತೃತ್ವದಲ್ಲಿ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು. ಸಂಧ್ಯಾವಂದನೆ, ಗಾಯತ್ರಿ ಜಪ, ನೆರೆವೇರಿಸಿ ಯಜ್ಞೋಪವೀತ ಧಾರಣೆ ಹಾಗೂ ವಿಸರ್ಜಿಸುವ ಮಂತ್ರ ಜಪಿಸುವ ಮೂಲಕ ಜನಿವಾರ ಬದಲಾಯಿಸಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಎನ್ ಶ್ರೀನಿವಾಸನ್
ಭಾರತೀಯ ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವವಿದೆ, 8ನೇ ವರ್ಷಕ್ಕೆ ವಟುವಿಗೆ ಉಪನಯನ ಮಾಡಿ ಗಾಯತ್ರಿ ಮಂತ್ರ ಉಪದೇಶಿಸಿ ಗುರುಕುಲಕ್ಕೆ ಕಳಿಸುವ ಪಂಪರೆಯಿತ್ತು. ಯಜುರ್ ವೇದ ಋಗ್ವೇದ ಪ್ರಕಾರವಾಗಿ ಶಾಸ್ತ್ರಗಳನ್ನ ಪಾಲಿಸುವ ವೈದೀಕರು ತಮ್ಮ ಋಷಿಗಳಿಗೆ ಪೂಜಿಸಿ ಯಜ್ಞೋಪವೀತ ಜನಿವಾರ ಧಾರಣೆ ಮಾಡುವ ಉಪಾಕರ್ಮ‌ ಧರ್ಮರಕ್ಷಣೆಯ ಪ್ರತೀಕವಾಗಿದೆ. ಸಾವಿರಾರು ವರ್ಷಗಳ ಹಿಂದೆ ಸಂವತ್ಸರಗಳ ಹಬ್ಬಗಳಲ್ಲಿ ಪಂಚಾಂಗ ನಿರ್ಣಯಿಸಿರುವಂತೆ ಮಹೂರ್ತ ಆಚರಣೆ ಪಾಲಿಸುವ ಕ್ರಮಕ್ಕೆ ಮೊದಲೇ ನಿಶ್ಚಯಿಸಿರುತ್ತದೆ, ಎಂದರೆ ಸನಾತನ ಧರ್ಮದ ಶಕ್ತಿಯ ಸಂಕೇತವಾಗಿದೆ ಎಂದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಗಿರೀಶ್, ಅಶ್ವಿನ್, ಶ್ರೀರಾಮ್,ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *