ಮಾವುತರು ಹಾಗೂ ಕವಾಡಿಗರೊಂದಿಗೆ ರಕ್ಷಾಬಂಧನ್ ಆಚರಣೆ…ರಾಖಿ ಕಟ್ಟಿ ಶುಭ ಹಾರೈಸಿದ ಮಹಿಳೆಯರು…

ಮಾವುತರು ಹಾಗೂ ಕವಾಡಿಗರೊಂದಿಗೆ ರಕ್ಷಾಬಂಧನ್ ಆಚರಣೆ…ರಾಖಿ ಕಟ್ಟಿ ಶುಭ ಹಾರೈಸಿದ ಮಹಿಳೆಯರು…

ಮೈಸೂರು,ಆ12,Tv10 ಕನ್ನಡ

ದಸರಾ ಮಹೋತ್ಸವ ಆಚರಣೆಗಾಗಿ ಕಾಡಿನಿಂದ ನಾಡಿಗೆ ಬಂದ ಗಜಪಡೆಯ ಮಾಹುತರು ಹಾಗೂ ಕಾವಾಡಿಗರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಣೆ ಮಾಡಲಾಯಿತು.ಇದೇ ವೇಳೆ ಶ್ರಾವಣ ಮಾಸದ ಲಡ್ಡು ಪ್ರಸಾದ ವಿತರಣೆ ಮಾಡಿ ದಸರಾ ಮಹೋತ್ಸವ ಯಶಸ್ಸಿಗಾಗಿ ಮಹಿಳೆಯರು ಹಾರೈಸಿದರು.
ಅರಮನೆ ಆವರಣದಲ್ಲಿ ತಂಗಿರುವ ಮಾಹುತರು ಮತ್ತು ಕಾವಾಡಿಗಳಿಗೆ ಆರತಿ ಬೆಳಗಿ, ಕುಂಕುಮದ ತಿಲಕವನ್ನುಇಟ್ಟು, ಶ್ರಾವಣ ಮಾಸದ ಲಡ್ಡು ಪ್ರಸಾದವನ್ನು ವಿತರಿಸಿ, ರಕ್ಷೆಯನ್ನು ಕಟ್ಟುವ ಮೂಲಕ ಶ್ರೀ ದುರ್ಗಾ ಫೌಂಡೇಶನ್ ಮಹಿಳೆಯರು ವಿಶೇಷವಾಗಿ ರಕ್ಷಾಬಂಧನನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ಸಹೋದರರ ಸಮಾನರಾದ ಮಾವುತರು ಹಾಗೂ ಕವಾಡಿಗಳಿಗೆ ರಕ್ಷೆ ಕಟ್ಟುವ ಸೌಭಾಗ್ಯ ನಮ್ಮದಾಗಿರುವುದು ಸಂತಸವನ್ನುಂಟು ಮಾಡಿದೆ. ಭಾರತೀಯ ಪರಂಪರೆಯಲ್ಲಿ ರಕ್ಷಾ ಬಂಧನ್ ಹಬ್ಬಕ್ಕೆ ಬಹಳ ಮಹತ್ವವಿದೆ, ಸಹೋದರಿಯರು ತಮ್ಮ ಸಹೋದರರಿಗೆ ರಕ್ಷೆ ಕೋರಿ ರಕ್ಷಾಬಂಧನ ಕಟ್ಟುವ ಭಾವನಾತ್ಮಕ ಮತ್ತು ಪವಿತ್ರ
ಹಬ್ಬವಿದು ಎಂದು ಬಣ್ಣಿಸಿದರು.ಈ ಸಂದರ್ಭದಲ್ಲಿ ಡಿಸಿಎಫ್ ಪ್ರಭು ರವರಿಗೆ ಮಹಿಳೆಯರು ರಕ್ಷೆಯನ್ನು ಕಟ್ಟಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಖುಷಿ ವಿನು,ಕಾವ್ಯ,ಜಿ ರಾಘವೇಂದ್ರ,ಎಸ್.ಎನ್ ರಾಜೇಶ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *