
ಮೇಟಗಳ್ಳಿ ಠಾಣೆ ಪೊಲೀಸರಿಂದ ನಶ ಮುಕ್ತ ಭಾರತ ಅಭಿಯಾನ…ವಿಧ್ಯಾರ್ಥಿಗಳ ಸಹಭಾಗಿತ್ವದಲ್ಲಿ ಜಾಗೃತಿ…
- TV10 Kannada Exclusive
- August 13, 2025
- No Comment
- 106



ಮೈಸೂರು,ಆ13,Tv10 ಕನ್ನಡ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾದಕ ವಸ್ತು ತಯಾರಕ ಘಟಕ ಪತ್ತೆಯಾದ ಹಿನ್ನಲೆ ನಗರ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ.ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಖುದ್ದಾಗಿ ರೈಡ್ ಮಾಡುವ ಮೂಲಕ ಘಾತುಕರಿಗೆ ಎಚ್ಚರಿಕೆ ಗಂಟೆ ರವಾನಿಸಿದ್ದಾರೆ.ಇದರೊಂದಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳಿಗೂ ಒತ್ತು ನೀಡುತ್ತಿದ್ದಾರೆ.ನಶ ಮುಕ್ತ ಭಾರತ ಎಂಬ ಅಭಿಯಾನ ಆರಂಭಿಸಲಾಗಿದೆ.ಮಾದಕ ವಸ್ತುಗಳಿಂದ ದೂರವಿರುವಂತೆ ಎಚ್ಚರಿಕೆ ನೀಡುವ ಸಂದೇಶ ರವಾನಿಸುತ್ತಿದ್ದಾರೆ.ಶಾಲಾ ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಅರಿವು ಮೂಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.ಇಂದು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ನಶ ಮುಕ್ತ ಭಾರತ ಅಭಿಯಾನ ಆರಂಭವಾಗಿದೆ.ಠಾಣೆಯ ನಿರೀಕ್ಷಕರಾದ ಅರುಣ್ ರವರ ನೇತೃತ್ವದಲ್ಲಿ ಅಭಿಯಾನ ಆರಂಭಿಸಲಾಗಿದೆ.ಜೆಎಸ್ ಎಸ್ ಆಂಗ್ಲ ಮಾಧ್ಯಮ ಶಾಲೆ ವಿಧ್ಯಾರ್ಥಿಗಳು ಪೊಲೀಸರ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.ಶಾಲೆಯ ನೂರಾರು ವಿಧ್ಯಾರ್ಥಿಗಳು ಮೇಟಗಳ್ಳಿ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸಿದ್ದಾರೆ…