ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ನಗರ ಪೊಲೀಸರ ಸಮರ…ನಗರದಾದ್ಯಂತ ಜಾಗೃತಿ…ನಶ ಮುಕ್ತ ಭಾರತ ಅಭಿಯಾನ ಆರಂಭ…

ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ನಗರ ಪೊಲೀಸರ ಸಮರ…ನಗರದಾದ್ಯಂತ ಜಾಗೃತಿ…ನಶ ಮುಕ್ತ ಭಾರತ ಅಭಿಯಾನ ಆರಂಭ…

ಮೈಸೂರು,ಆ13,Tv10 ಕನ್ನಡ

ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ಮೈಸೂರು ನಗರ ಖಾಕಿ ಪಡೆ ಸಮರ ಸಾರಿದೆ.ಮಾದಕ ವಸ್ತುಗಳ ತಯಾರಿಕಾ ಘಟಕ ಪತ್ತೆಯಾದ ಬೆನ್ನ ಹಿಂದೆಯೇ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ನೇತೃತ್ವದಲ್ಲಿ ದಾಳಿಗಳು ನಡೆಯುತ್ತಿದೆ.ಈಗಾಗಲೇ ವಿವಿದ ಪೊಲೀಸ್ ಠಾಣೆಗಳಲ್ಲಿ ನೂರಾರು ಪ್ರಕರಣಗಳು ದಾಖಲಾಗಿವೆ.ಸಾಕಷ್ಟು ಪ್ರಮಾಣದಲ್ಲಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಹಲವರನ್ನ ಬಂಧಿಸಲಾಗಿದೆ.ಹಾಸ್ಟೆಲ್ ಗಳು,ಪಿಜಿ ಗಳು,ಸ್ಟೂಡೆಂಟ್ ಗಳು ತಂಗಿರುವ ಕೊಠಡಿಗಳು,ಲಾಡ್ಜ್ ಗಳು ಸೇರಿದಂತೆ ಸಾಕಷ್ಟು ಸ್ಥಳಗಳ ಮೇಲೆ ದಾಳಿ ನಡೆಸಿ ಮಾದಕ ವಸ್ತುಗಳ ವಿರುದ್ದ ಕಾರ್ಯಾಚರಣೆ ನಡೆಸಿದ್ದಾರೆ. ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಪೊಲೀಸರು ನಶ ಮುಕ್ತ ಭಾರತ ಅಭಿಯಾನ ಆರಂಭಿಸಿದ್ದಾರೆ.ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅಭಿಯಾನ ಆರಂಭಿಸಿದ್ದಾರೆ.ನಗರದ ಎಲ್ಲಾ ಠಾಣೆಗಳಲ್ಲೂ ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಹಯೋಗದೊಂದಿಗೆ ಜಾಗೃತಿ ಮೂಡಿಸಲಾಗುತ್ತಿದೆ.ವಿಜಯನಗರ ಉಪವಿಭಾಗದ ವತಿಯಿಂದ ಅಭಿಯಾನಕ್ಕೆ ಅದ್ದೂರಿಯಾಗಿ ಚಾಲನೆ ದೊರೆತಿದೆ.ಮಂಡಿ,ಮೇಟಗಳ್ಳಿ,ಲಷ್ಕರ್,ವಿಜಯನಗರ,ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅರಿವು ಮೂಡಿಸಲಾಗುತ್ತಿದೆ.ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಹ ಪೊಲೀಸರಿಗೆ ಸಾಥ್ ನೀಡಿದ್ದಾರೆ.ಪೋಸ್ಟರ್ ಗಳು,ಬ್ಯಾನರ್ ಗಳ,ಭಿತ್ತಿಪತ್ರಗಳ ಮೂಲಕ ಸಂದೇಶಗಳನ್ನ ರವಾನಿಸಲಾಗುತ್ತಿದೆ.ಸಸಿಗಳನ್ನ‌ ನೆಡುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಕಾಲೇಜ್ ಗಳಲ್ಲಿ ಸಹ ವಿಧ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಗಳನ್ನ ನೀಡಲಾಗುತ್ತಿದೆ.ಮೊದಲ ಬಾರಿಗೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉರ್ದು ಭಾಷೆಯಲ್ಲಿ ಬರೆದ ಸಂದೇಶಗಳು ಗಮನ ಸೆಳೆಯುತ್ತಿದೆ.ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿ,ಅಪರಾಧ ಮತ್ತು ಸಂಚಾರ ಡಿಸಿಪಿ ಸುಂದರ ರಾಜ್,ಎಸಿಪಿ ರವಿಪ್ರಸಾದ್ ನಿರೀಕ್ಷಕರಾದ ಅರುಣ್,ಪ್ರಸಾದ್,ಸುರೇಶ್ ಕುಮಾರ್,ದಿವಾಕರ್ ರವರು ಸೇರಿದಂತೆ ಹಲವು ಸಿಬ್ಬಂದಿಗಳು ಅಭಿಯಾನದ ಮೂಲಕ ಜನರ ಮನೆ ಮನೆಗೆ ತಲುಪುವ ಪ್ರಯತ್ನ ಮಾಡುತ್ತಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *