ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸಾಮೂಹಿಕ ಸೀಮಂತ…50 ಕ್ಕೂ ಹೆಚ್ಚು ಮಹಿಳೆಯರಿಗೆ ಸೀಮಂತ…
- TV10 Kannada Exclusive
- August 13, 2025
- No Comment
- 61
ಮೈಸೂರು,ಆ13,Tv10 ಕನ್ನಡ
ಮೈಸೂರಿನ ವಿಜಯನಗರದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸಾಮೂಹಿಕ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶ್ರೀ ದುರ್ಗಾ ಫೌಂಡೇಶನ್ ಮತ್ತು ಕೆ ವಿ ಕೆ ಫೌಂಡೇಶನ್ ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 50ಕ್ಕೂ ಹೆಚ್ಚು ಮಹಿಳೆಯರಿಗೆ ಸೀಮಂತ ಮಾಡಲಾಯಿತು.ಹಣ್ಣು,ಹೂವು,ಅರಿಶಿನ,ಕುಂಕುಮ,ಬಳೆಗಳು,ಸೀರೆ,ಬ್ಲೌಸ್ ಪೀಸ್ ಸೇರಿದಂತೆ ಇನ್ನಿತರ ಸಾಮಗ್ರಿಗಳನ್ನ ಸಂಪ್ರದಾಯದಂತೆ ಮಹಿಳೆಯರಿಗೆ ನೀಡಿ ಹರಸಲಾಯಿತು.
ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್, ಸೌಮ್ಯ ಅನಿಲ್ ಚಿಕ್ಕಮಾದು,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಬಸವರಾಜ್, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಇಂದಿರಾ ಗಾಂಧಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ರವಿ ಮಂಚೇಗೌಡನ ಕೊಪ್ಪಲು,ಮುಖಂಡರಾದ ಜಿ ರಾಘವೇಂದ್ರ, ಕೆವಿಕೆ ಫೌಂಡೇಶನ್ ಅಧ್ಯಕ್ಷರಾದ ಖುಷಿ ವಿನು, ಕಾವ್ಯ,
ಮಂಜುಳಾ ಭಾಗವಹಿಸಿದ್ದರು…