ವಿಷ್ಣು ಸಮಾಧಿ ಇದ್ದ ಸ್ಥಳ ಮುಟ್ಟುಗೋಲು…ಮೈಸೂರಿನಲ್ಲಿ ಅಭಿಮಾನಿಗಳ ಸಂಭ್ರಮ…
- TV10 Kannada Exclusive
- August 30, 2025
- No Comment
- 67


ಮೈಸೂರು,ಆ29,Tv10 ಕನ್ನಡ
ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸಮಾಧಿ ಇದ್ದ ಸ್ಥಳವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡ ಕ್ರಮವನ್ನ ಅಭಿಮಾನಿಗಳು ಸಂತಸದಿಂದ ಸ್ವಾಗತಿಸಿದ್ದಾರೆ. ಪುಣ್ಯಭೂಮಿಯನ್ನು
ಸಂರಕ್ಷಿಸಲು ಮುಂದಾಗಿರುವ ಸರ್ಕಾರದ ನಿಲುವನ್ನು ಸಮರ್ಥಿಸಿದ್ದಾರೆ. ವಿಷ್ಣುವರ್ಧನ್ ಅಭಿಮಾನಿಗಳು ಮೈಸೂರಿನ ಅಗ್ರಹಾರ ವೃತ್ತದಲ್ಲಿ ಸಾಹಸಸಿಂಹ ನ ಭಾವಚಿತ್ರ ಹಿಡಿದು ಜೈಕಾರ ಕೂಗುತ್ತಾ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಅಭಿಮಾನಿಗಳ 15 ವರ್ಷಗಳ ಹೋರಾಟಕ್ಕೆ ಸಂದ ಜಯ ಎಂದು ಬಣ್ಣಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ಅಧ್ಯಕ್ಷ ಎಂ ಡಿ ಪಾರ್ಥಸಾರಥಿ
75ನೇ ವರ್ಷದ ಸಂಭ್ರಮ ಸಂದರ್ಭದಲ್ಲಿ ವಿಷ್ಣುವರ್ಧನ್ ರವರಿಗೆ ಜಯ ಸಿಕ್ಕಿದೆ.
ವಿಷ್ಣುವರ್ಧನ್ ವಿಚಾರದಲ್ಲಿ ಪದೇ ಪದೇ ತೊಂದರೆ ಕೊಡುತ್ತಾ ಬಂದಿದ್ದರು. ಅಭಿಮಾನಿಗಳು ಸಹನೆ ಹಾಗೂ ಶಾಂತಿ ರೀತಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ರಾತ್ರೋರಾತ್ರಿ ಅವರ ಪುಣ್ಯಭೂಮಿಯನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಕನ್ನಡದ ಮೇರು ನಟ ವಿಷ್ಣುವರ್ಧನ್ ಅಭಿಮಾನಿಗಳಿಗೆ ನೋವನ್ನು ಉಂಟು ಮಾಡಿದರು ಆದರೆ ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ ಎಂಬ ಉದಾಹರಣೆ ಈ ಘಟನೆ ಸಾಕ್ಷಿ ಎಂದು ಸಂತಸ ವ್ಯಕ್ತಪಡಿಸಿದರು..
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್, ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಅಧ್ಯಕ್ಷ ಶಿವರಾಂ, ಜೆಡಿಎಸ್ ಕಾರ್ಯದಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್, ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್ ಎನ್ ರಾಜೇಶ್, ಮಡಿವಾಳ ಸಂಘದ ರಾಜ್ಯಾಧ್ಯಕ್ಷ ರವಿ, ಸಂತೋಷ್, ಕುಮಾರ್ ಆರಾಧ್ಯ, ರಂಗನಾಥ್, ಅಭಿ, ಲಕ್ಷ್ಮಣ್, ಮಹದೇವ್, ಜಗದೀಶ್, ನಾಗೇಶ್, ಕಿರಣ್ ಹಾಗೂ ಇನ್ನಿತರರು ಹಾಜರಿದ್ದರು…