ಶ್ರೀ ಕೃಷ್ಣ ಜನ್ಮಾಷ್ಟಮಿ…ಮಕ್ಕಳ ಛದ್ಮ ವೇಷ ಸ್ಪರ್ಧೆ ಹಾಗೂ ಶ್ರೀ ಕೃಷ್ಣನ ಭವ್ಯ ಮೆರವಣಿಗೆ..
- TV10 Kannada Exclusive
- September 15, 2025
- No Comment
- 264

ಶ್ರೀ ಕೃಷ್ಣ ಜನ್ಮಾಷ್ಟಮಿ…ಮಕ್ಕಳ ಛದ್ಮ ವೇಷ ಸ್ಪರ್ಧೆ ಹಾಗೂ ಶ್ರೀ ಕೃಷ್ಣನ ಭವ್ಯ ಮೆರವಣಿಗೆ

ಮೈಸೂರು,ಸೆ15,Tv10 ಕನ್ನಡ

ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ಧಾಮದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀ ಕೃಷ್ಣ ಟ್ರಸ್ಟ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ
ಮಕ್ಕಳಿಗೆ
ಛದ್ಮಾ ವೇಷ ಸ್ಪರ್ಧೆ ಆಯೋಜಿಸಲಾಗಿತ್ತು.ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ಮಕ್ಕಳು ಕೃಷ್ಣ ರಾಧೆ ವೇಷ ಭೂಷಣ ಧರಸಿ ಉತ್ಸಾಹದಿಂದ ಪಾಲ್ಗೊಂಡಿದ್ದರು,
ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಯಿತು
ನಂತರ ಶ್ರೀ ಕೃಷ್ಣ ಲೀಲೋತ್ಸವ ಹಾಗೂ ರಾಜಬೀದಿಯಲ್ಲಿ ಶ್ರೀ ಕೃಷ್ಣನ ಭವ್ಯ ಮಾರವಣಿಗೆ ಹಮ್ಮಿಕೊಳ್ಳಲಾಗಿತ್ತು. ಭಜನೆ ಹಾಗೂ ವಿವಿಧ ಕಲಾತಂಡಗಳು ಭಾಗವಹಿಸಿ ಮೆರವಣಿಗೆಗೆ ಮೆರುಗು ನೀಡಿದವು.ನಂತರ
ಮೊಸರು ಕುಡಿಕೆ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದಲ್ಲಿ
ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರು ರವಿಶಾಸ್ತ್ರಿ, ಚಂದ್ರಶೇಖರ್, ಕಾರ್ಯದರ್ಶಿ ಕೆ ವಿ ಶ್ರೀಧರ್, ಶ್ರೀ ಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷರು ಗೋಪಾಲಕೃಷ್ಣನ್, ಉಪಾಧ್ಯಕ್ಷರು ಶ್ರೀವತ್ಸ ರಾವ್, ಕಾರ್ಯದರ್ಶಿ ಪಿ ಜಿ ಗುರುಪ್ರಸಾದ್, ರಾಘವೇಂದ್ರ ರಾವ್, ಪುರಾಣಿಕ್, ಮೋಹನ್, ಸುಬ್ರಹ್ಮಣ್ಯ ತಂತ್ರಿ, ಹಾಗೂ ಇನ್ನಿತರರು ಹಾಜರಿದ್ದರು…