ಅಕ್ಷರ ಲೋಕದ ಮಾಂತ್ರಿಕ ಎಸ್ ಎಲ್ ಭೈರಪ್ಪ ಇನ್ನಿಲ್ಲ…

ಅಕ್ಷರ ಲೋಕದ ಮಾಂತ್ರಿಕ ಎಸ್ ಎಲ್ ಭೈರಪ್ಪ ಇನ್ನಿಲ್ಲ…

ಮೈಸೂರು,ಸೆ24,Tv10 ಕನ್ನಡ

ನಾಡಿನ ಹಿರಿಯ ಸಾಹಿತಿ , ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್​ಎಲ್ ಬೈರಪ್ಪ ಅವರು ನಿಧನರಾಗಿದ್ದಾರೆ. 94 ವರ್ಷದ ಬೈರಪ್ಪ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರು ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಭಾಜನರಾಗಿದ್ದರು.
ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ ಎಲ್ ಬೈರಪ್ಪ ನಿಧನರಾಗಿದ್ದಾರೆ.
ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ ಆಗಸ್ಟ್‌ 20, 1931 ಜನಿಸಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು.ಪ್ರೌಢ ಶಿಕ್ಷಣ ಹಾಗೂ ಕಾಲೇಜು ಓದು ಮೈಸೂರಿನಲ್ಲಿ ಮುಂದುವರೆಸಿದ ಭೈರಪ್ಪನವರು ಎಂ.ಎ.ನಲ್ಲಿ ಸುವರ್ಣ ಪದಕದೊಂದಿಗೆ ತೇರ್ಗಡೆಯಾದರು.
ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ “ಸತ್ಯ ಮತ್ತು ಸೌಂದರ್ಯ”, ಎಂಬ ಇಂಗ್ಲಿಷ್‌ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಗಳಿಸಿದ್ದಾರೆ.ಆಯಾ ಕಾಲದಲ್ಲಿ ಬಂದ ಅವರ ಕಾದಂಬರಿಗಳೆಲ್ಲಾ ಚರ್ಚೆಗೆ ಒಳಗಾಗಿವೆ. ಇಂಗ್ಲಿಷ್ ಭಾಷೆಯೂ ಸೇರಿದಂತೆ ಭಾರತೀಯ ಹಲವು ಭಾಷೆಗಳಿಗೆ ಭೈರಪ್ಪನವರ ಕಾದಂಬರಿಗಳು ಅನುವಾದಗೊಂಡಿವೆ. ಗೃಹಭಂಗ, ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಮುಂತಾದವು ಹಿಂದಿ, ಮರಾಠಿಯಲ್ಲಿ ಜನಪ್ರಿಯವಾಗಿವೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *