2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್…

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್…

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್…

ಹನೂರು,ಅ17,Tv10 ಕನ್ನಡ

ತಾಲೂಕಿನ ಪ್ರಸಿದ್ಧ ಧಾರ್ಮಿಕ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ ಬಳಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ 2 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಮ್ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಭೂಮಿ ಪೂಜೆ ಯನ್ನು ನೆರವೇರಿಸುವ ಮೂಲಕ
ಶಾಸಕ ಎಂ.ಆರ್.ಮಂಜುನಾಥ್ ಚಾಲನೆ ನೀಡಿದರು.

ನಂತರ ಮಾತನಾಡಿ ಗುಣಮಟ್ಟ ಕಾಮಗಾರಿಯನ್ನು ಕೈಗೊಳ್ಳುವಂತೆ ಗುತ್ತಿಗೆ ದಾರರಿಗೆ ಸಲಹೆ ನೀಡಿದರು.ಸಾಲೂರು ಮಠದ ಸುತ್ತ ನಿರ್ಮಿಸುವ ತಡೆಗೋಡೆಯನ್ನು ಅಚ್ಚುಕಟ್ಟಾಗಿ ನಿರ್ಮಿಸಿ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವಂತೆ ಸೂಚಿಸಿದರು. ಈ ಪುಣ್ಯ ಸ್ಥಳದಲ್ಲಿ ಯಾವುದೇ ರೀತಿಯಾದ ಲಾಭವನ್ನು ಕಾಣದೆ ಗುಣಮಟ್ಟದ ವಸ್ತುಗಳನ್ನು ಬಳಸಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಬರುವಂತಹ ಭಕ್ತರು ತುಂಬು ಮನಸ್ಸಿನಿಂದ ಹರಸುವುದರಿಂದ ನಿಮ್ಮ ಬಾಳಲ್ಲಿ ನೆಮ್ಮದಿಯನ್ನು ತರುತ್ತದೆ. ಮುಂದಿನ ದಿನಗಳಲ್ಲಿ ಸಾಲೂರು ಮಠವು ಅತೀ ಹೆಚ್ಚು ಭಕ್ತರನ್ನು ಸೆಳೆಯುವಂತಾಗಿ ಭಕ್ತರು ನೆಮ್ಮದಿಯಿಂದ ವಾಸ್ತವ್ಯವನ್ನು ಹೂಡಿ ತಮ್ಮ ಕಷ್ಟಗಳನ್ನು ಪರಿಹರಿಸಿಕೊಳ್ಳುವಂತವರಾಗಲಿ ಎಂದು ಈ ಸಮಯದಲ್ಲಿ ತಿಳಿಸಿದರು.

ಈ ಸಂರ್ಭದಲ್ಲಿ ಶಾಂತಮಲ್ಲಿಕಾರ್ಜುನ ಸ್ವಾಮಿಗಳು, ಪ್ರಾಧಿಕಾರದ ಕಾರ್ಯದರ್ಶಿ ಎ ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಸಣ್ಣ ನೀರಾವರಿ ಇಲಾಖೆಯ ಎಇಇ ಅಭಿಲಾಷ್, ಎ.ಇ ಪ್ರತಾಪ್,ಹಾಗೂ ಮುಖಂಡರುಗಳಾದ ಮಂಜೇಶ್ ಗೌಡ, ಚಿನ್ನವೆಂಕಟ್, ಡಿ ಕೆ ರಾಜು, ಸುರೇಶ್, ನವೀನ್, ಹಾಗೂ ಇತರರು ಇದ್ದರು.

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *