ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ತೆಪ್ಪೋತ್ಸವ ನೆರವೇರಿತು.
- TV10 Kannada Exclusive
- October 23, 2025
- No Comment
- 21
ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ತೆಪ್ಪೋತ್ಸವ ನೆರವೇರಿತು.

ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಬೆಳಗ್ಗೆ 9:15 ರಿಂದ 9:55 ರ ಗಂಟೆಯಲ್ಲಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವು ಜರುಗಿತು.
ನಂತರ ಸಂಜೆ 6:30 ರ ವೇಳೆಯಲ್ಲಿ ಸಾಲೂರು ಮಠದ ಪೀಠಧ್ಯಕ್ಷರಾದ ಡಾ. ಶಾಂತಮಲ್ಲಿಕಾರ್ಜುನ ಸ್ವಾಮಿ, ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು, ಡಿವೈಎಸ್ಪಿ ಧರ್ಮೇಂದ್ರ ಸೇರಿದಂತೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ತೆಪ್ಪೋತ್ಸವ ನಡೆಯಿತು.
ತೆಪ್ಪೋತ್ಸದ ವೇಳೆಯಲ್ಲಿ ಯುವಕ, ಯುವತಿಯರು ಕುಣಿದು ಕುಪ್ಪಳಿಸಿದರು.
ತೆಪ್ಪೋತ್ಸವದ ಬಳಿಕ ದೀಪಾವಳಿ ಜಾತ್ರೆಗೆ ತೆರೆ ಬೀಳಲಾಯಿತು.
ವರದಿ:ವಿಜಯ್ ಕುಮಾರ್. ಕಾಂಚಳ್ಳಿ /ಹನೂರು.