ವಾಕಿಂಗ್ ಮಾಡುತ್ತಿದ್ದ ವ್ಯಕ್ತಿ ಕುಸಿದುಬಿದ್ದು ಸಾವು…ಹೃದಯಾಘಾತ ಶಂಕೆ…
- Crime
- November 2, 2025
- No Comment
- 14

ಮೈಸೂರು,ನ2,Tv10 ಕನ್ನಡ

ವಾಕಿಂಗ್ ಮಾಡುತ್ತಿದ್ದ ವ್ಯಕ್ತಿ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಮೈಸೂರಿನ ಹೆಬ್ಬಾಳ್ ಬಡಾವಣೆ ಬಸವನಗುಡಿ ಸರ್ಕಲ್ ಬಳಿ ನಡೆದಿದೆ.ಸುಮಾರು 60 ವರ್ಷದ ವ್ಯಕ್ತಿ ಫುಟ್ ಪಾತ್ ನಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ.ಸ್ಥಳಕ್ಕೆ ಹೆಬ್ಬಾಳ್ ಠಾಣೆ ಪೊಲೀಸರು ಭೇಟಿ ನೀಡಿ ವ್ಯಕ್ತಿಯ ಬಗ್ಗೆ ಮಾಹಿತಿ ಪಡೆಯಲು ಯತ್ನಿಸುತ್ತಿದ್ದಾರೆ.ಹೃದಯಾಘಾತದಿಂದ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ.ಮಾಜಿ ಕಾರ್ಪೊರೇಟರ್ ಶ್ರೀನಿವಾಸ್ ರವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.ಅಪರಿಚಿತ ವ್ಯಕ್ತಿಯ ಬಗ್ಗೆ ಮಾಹಿತಿ ಅರಿತಲ್ಲಿ ಹೆಬ್ಬಾಳ್ ಠಾಣೆ ಸಂಪರ್ಕಿಸಬಹುದಾಗಿದೆ….