ತಿರುಪತಿ ಲಡ್ಡುಗೆನಕಲಿ ತುಪ್ಪ ಬಳಕೆ ಧೃಢ…ಕಠಿಣ ಶಿಕ್ಷೆಗೆ ಆಗ್ರಹ…

ತಿರುಪತಿ ಲಡ್ಡುಗೆನಕಲಿ ತುಪ್ಪ ಬಳಕೆ ಧೃಢ…ಕಠಿಣ ಶಿಕ್ಷೆಗೆ ಆಗ್ರಹ…

ಮೈಸೂರು,ನ11,Tv10 ಕನ್ನಡ

ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ನಕಲಿ ತುಪ್ಪ ಬಳಸಿರುವುದು ಎಸ್‌ಐಟಿ ತನಿಖೆಯಲ್ಲಿ ದೃಢಪಟ್ಟಿದ್ದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್ ಪದಾಧಿಕಾರಿಗಳು ಜಿಲ್ಕಾಧಿಕಾರಿಗಳಿಗೆ ಮನವಿ ಪತ್ರ ನೀಡಿದರು. ತಹಸಿಲ್ದಾರ್ ಶಿವಪ್ರಸಾದ್ ರವರಿಗೆ ಮನವಿ ಪತ್ರ ನೀಡಿದರು.
ನಂತರ ಮಾತನಾಡಿದ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್
‘ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ಗಂಭೀರ ಪ್ರಕರಣ ಇದಾಗಿದೆ. ಆಂಧ್ರಪ್ರದೇಶದ ಹಿಂದಿನ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ನೇತೃತ್ವದ ಸರ್ಕಾರದ ಆಡಳಿತಾವಧಿಯಲ್ಲಿ ನಡೆದ ಕೃತ್ಯವಿದು. ಅಕ್ರಮಕ್ಕೆ ಕಾರಣರಾದವರ ವಿರುದ್ಧ ಸಿಬಿಐ ಮತ್ತು ಆಂಧ್ರಪ್ರದೇಶ ಪೊಲೀಸರ ತನಿಖೆಯ ಆಧಾರದ ಮೇಲೆ ಸೂಕ್ತ ಶಿಕ್ಷೆ ಆಗಬೇಕು’
‘ಲಡ್ಡುಗಳಲ್ಲಿ ಕೊಬ್ಬಿನಾಂಶ, ಮಾಂಸದ ಅಂಶವಿರುವ ಕಳಪೆ ಪದಾರ್ಥ ಗಳನ್ನು ಬಳಸಲಾಗಿದೆ ಎಂಬುದೂ ತನಿಖೆಯಲ್ಲಿ ದೃಢವಾಗಿದೆ. ಉತ್ತರಾಖಂಡ ಮೂಲದ ಬೋಲ್ ಬಾಬಾ ಎಂಬ ಸಂಸ್ಥೆಯಿಂದ ಕಳಪೆ ತುಪ್ಪ ತರಿಸಿಕೊಂಡು ಅವ್ಯವಹಾರ ನಡೆಸಲಾಗಿದೆ. ಪ್ರಸಾದದ ಗುಣಮಟ್ಟ ಕಾಪಾಡಲು ನಂದಿನಿ (ಕೆಎಂಎಫ್) ತುಪ್ಪವನ್ನೇ ಬಳಸಬೇಕು’ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಪ್ರಮೋದ್ ಗೌಡ, ಸಂದೇಶ್, ಗುರುರಾಜ್ ಶೆಟ್ಟಿ, ಎಸ್ ಎನ್ ರಾಜೇಶ್, ಪ್ರಶಾಂತ್, ಅಮಿತ್, ಸಚಿನ್ ನಾಯಕ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *