ಪಾದಚಾರಿಗೆ ಬೈಕ್ ಡಿಕ್ಕಿ ಓರ್ವ ಸಾವು ಮತ್ತೊಬ್ಬನ ಸ್ಥಿತಿ ಗಂಭೀರ
- Crime
- November 16, 2025
- No Comment
- 18
ಪಾದಚಾರಿಗೆ ಬೈಕ್ ಡಿಕ್ಕಿ ಓರ್ವ ಸಾವು ಮತ್ತೊಬ್ಬನ ಸ್ಥಿತಿ ಗಂಭೀರ
ಹನೂರು:- ಮಲೈ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನವು ಪಾದಚಾರಿಗೆ ಗುದ್ದಿದ್ದ ಪರಿಣಾಮ ಬೈಕ್ ನಲ್ಲಿದ್ದ ಯುವಕ ಸ್ಥಳದಲ್ಲೇ ಮೃತ ಪಟ್ಟಿದ್ದೂ ಮತ್ತೊರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕ್ಷೇತ್ರ ವ್ಯಾಪ್ತಿಯ ಕೊಂಗರಹಳ್ಳಿ ಸಮೀಪದಲ್ಲಿ ನಡೆದಿದೆ.
ಯುವಕರ ತಂಡವೊಂದು ನಾಲ್ಕು ದ್ವಿಚಕ್ರ ವಾಹನಗಳಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಮುಗಿಸಿಕೊಂಡು ಹಿಂದಿರುಗುವ ವೇಳೆ ಕೊಂಗರಹಳ್ಳಿ ಗ್ರಾಮದ ಮಹಿಳಾ ಕಾಲೇಜು ಸಮೀಪ 60 ವರ್ಷದ ಸುರೇಶ್ ರಸ್ತೆ ದಾಟುತ್ತಿದ್ದ ವೇಳೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದ ಕಡೆ ಬರುತ್ತಿದ್ದ ಕೆ ಎ 45-ಇ ಸಿ 2314 ಸಂಖ್ಯೆಯ ಯಮಹ ಆರ್ 15 ದ್ವಿಚಕ್ರ ವಾಹನವು ಬಲವಾಗಿ ಗುದ್ದಿದ್ದ ಪರಿಣಾಮ ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ ಮಂಡ್ಯ ಮೂಲದ ಮಳವಳ್ಳಿ ತಾಲೂಕಿನ ರಾಮಾಂದೂರು ಗ್ರಾಮದ 19 ವರ್ಷದ ಮನೋಹರ್ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ಪಾದಚಾರಿ ಸುರೇಶ್ ಗೆ ತಲೆ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ಹಾಗೂ ಸವಾರ ರವಿಕುಮಾರ್ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಹತ್ತಿರದ ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಿಯ ಪೊಲೀಸರು ಸ್ಥಳಕ್ಕೆ ಆಗಮಿಸಿ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.