ಮೈಸೂರು ಜಿಲ್ಲೆಯಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳು ಸಾವು…
- TV10 Kannada Exclusive
- December 10, 2025
- No Comment
- 21

ಮೈಸೂರು ಜಿಲ್ಲೆಯಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳು ಸಾವು…

ಹುಣಸೂರು,ಡಿ10,Tv10 ಕನ್ನಡ
ಹುಣಸೂರು ತಾಲ್ಲೂಕು ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿಮರಿಗಳು ಸಾವನ್ನಪ್ಪಿವೆ.
ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದ ಹುಲಿ ಮರಿಗಳು ನಾಲ್ಕು ದಿನಗಳ ಅಂತರದಲ್ಲಿ ಸಾವನ್ನಪ್ಪಿವೆ.ಹುಲಿ ಮರಿಗಳ ಸಾವಿಗೆ ಕಾರಣ ತಿಳಿದು ಬಂದಿಲ್ಲ.
ಗೌಡನಕಟ್ಟೆಯ ಪ್ರಕಾಶ್ ಎಂಬುವರ ಜೋಳದ ಹೊಲದಲ್ಲಿ ನ.28ರಂದು ನಾಲ್ಕು ಮರಿಗಳೊಂದಿಗೆ ತಾಯಿ ಹುಲಿ ಕಾಣಿಸಿಕೊಂಡಿತ್ತು.
ಮದ್ಯರಾತ್ರಿ ತಾಯಿ ಹುಲಿ ಸೆರೆಯಾಗಿತ್ತು.ಎರಡು ದಿನಗಳ ನಂತರ ನ.30ರಂದು ನಾಲ್ಕು ಹುಲಿಮರಿಗಳು ಪತ್ತೆಯಾಗಿದ್ದವು.ಎರಡು ದಿನ ತಾಯಿಯಿಂದ ದೂರವಾಗಿದ್ದ ಮರಿಗಳು ಆಹಾರವಿಲ್ಲದೆ ಬಳಲಿದ್ದವು. ಸೆರೆ ಹಿಡಿಯುವ ವೇಳೆ ನಿತ್ರಾಣಗೊಂಡಿದ್ದವು.
ತಕ್ಷಣವೇ ಸೂಕ್ತ
ಪುನರ್ವಸತಿ ಕೇಂದ್ರಕ್ಕೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಗಾಬರಿಗೊಳಗಾಗಿದ್ದ ಮರಿಗಳು ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲಾ ಎಂದು ಹೇಳಲಾಗಿದೆ. ಅಸ್ವಸ್ಥಗೊಂಡಿದ್ದ ಹುಲಿ ಮರಿಗಳು ಸಾವನ್ನಪ್ಪಿದ್ದು
ಪಶುವೈದ್ಯರು ಹುಲಿ ಮರಿಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ಆದರೆ ತಾಯಿ ಹುಲಿ ಆರೋಗ್ಯದಿಂದಿದೆ.
ಹುಲಿಮರಿಗಳ ಅಂಗಾಗಗಳನ್ನು ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ…