ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹ.

ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹ.

ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹ.

ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 2 ಕೋಟಿ 53 ಲಕ್ಷ ರೂ ಸಂಗ್ರಹವಾಗಿದೆ.

ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಈ ದಿನ ಬೆಳಿಗ್ಗೆ 7.00 ಗಂಟೆಯಿಂದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ರವರ ದಿವ್ಯಸಾನಿದ್ಯದಲ್ಲಿ ಶ್ರೀ ರಘು, ಎ. ಈ, ಕ.ಆ.ಸೇ, (ಹಿ.ಶ್ರೇಣಿ) ಮಾನ್ಯ ಕಾರ್ಯದರ್ಶಿಗಳು ರವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು 28 ದಿನಗಳಲ್ಲಿ ಒಟ್ಟು ಮೊತ್ತ ರೂ.2,53,98,859.00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 25 ಗ್ರಾಂ, ಬೆಳ್ಳಿ 01 ಕೆ.ಜಿ 253 ಗ್ರಾಂ ಹುಂಡಿಯಲ್ಲಿ ದೊರೆತಿದೆ.

ಕಾರ್ತಿಕ ಮಾಸ, ಭಾನುವಾರ, ರಜಾ ದಿನಗಳು ಸೇರಿದಂತೆ ವಿಶೇಷ ದಿನಗಳಲ್ಲಿ ಕೂಡ ಭಕ್ತರ ಸಂಖ್ಯೆ ಗಣನೀಯವಾಗಿದ್ದರಿಂದ ದೇವರ ದರ್ಶನ ಪಡೆದಿದ್ದಾರೆ.

ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಶ್ರೀಮತಿ ಭಾಗ್ಯಮ್ಮ, ಕುಪ್ಯಾ , ಶ್ರೀ ಮರಿಸ್ವಾಮಿ, ಕಾಗಲವಾಡಿ, ಮಹದೇವಪ್ಪ ಕೀಳನಪುರ, ಕುಮಾರ ವಿಜಯ, ರಾವಂದೂರು, ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಶ್ರೀ ಮಹದೇವು, ಉಪ ಕಾರ್ಯದರ್ಶಿ ಶ್ರೀ ಚಂದ್ರಶೇಖರ.ಜಿ.ಎಲ್, ಲೆಕ್ಕಧೀಕ್ಷಕರಾದ ಶ್ರೀ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಶ್ರೀಮತಿ ಭಾರತಿ, ಬೆರಳಚ್ಚುಗಾರರು ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *