ಪತ್ರ ಬರಹಗಾರರ ಪ್ರತಿಭಟನೆ..ಪ್ರತ್ಯೇಕ ಲಾಗಿನ್ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ…
- TV10 Kannada Exclusive
- December 12, 2025
- No Comment
- 12

ಪತ್ರ ಬರಹಗಾರರ ಪ್ರತಿಭಟನೆ..
ಪ್ರತ್ಯೇಕ ಲಾಗಿನ್ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ…
ಮೈಸೂರು,ಡಿ12,Tv10 ಕನ್ನಡ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರು ನಗರ ಮತ್ತು ತಾಲೂಕು ಪತ್ರ ಬರಹಗಾರರ ಒಕ್ಕೂಟದ ವತಿಯಿಂದ
ಮೈಸೂರು ಉತ್ತರ ಉಪನೋಂದಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಮುದ್ರಾಂಕ ಹಾಗೂ ನೋಂದಣಿ ಇಲಾಖೆಯು ಈಗಾಗಲೇ ಕಾವೇರಿ 2.0 ತಂತ್ರಾಂಶದ ಮೂಲಕ ದಾಖಲಾತಿಗಳನ್ನು ರವಾನಿಸುವ ಬಗ್ಗೆ ಕ್ರಮ ಕೈಗೊಂಡಿದ್ದು, ಈ ಸಂಬಂಧ ಆಗಿದ್ದಾಂಗ್ಲೆ ಸುಧಾರಣೆ ವಿಷಯದಲ್ಲಿ ಹಲವಾರು ಬದಲಾವಣೆಗಳನ್ನು ತರಲಾಗಿದೆ. ಸುಧಾರಣೆಗಳಿಂದಾಗಿ ಜನಸಾಮಾನ್ಯರ ನೋಂದಣಿ ಪ್ರಕ್ರಿಯೆಯ ವೇಗ ಕುಂಠಿತವಾಗುತ್ತಿದೆ. ಜನ ಸಾಮಾನ್ಯರಿಗೆ ಸೇವೆ ನೀಡುವುದು ದುಸ್ಸಾಹಸವಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ಈಗಾಗಲೇ ವಿಭಾಗ ಪತ್ರ. ದಾನಪತ್ರ ಹಾಗೂ ಇನ್ನಿತರೆ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು ಸಹಾ ಸಾಧ್ಯವಾಗದ ಕಾರಣ ಜನಸಾಮಾನ್ಯರು ತಮ್ಮ ಕುಟುಂಬದ ಸ್ಥಿರಾಸ್ತಿಗಳನ್ನು ನೋಂದಣಿ ಮಾಡಿಕೊಳ್ಳುವುದು ಸಾಧ್ಯವಿಲ್ಲದಂತಾಗಿದೆ. ಸುಧಾರಣೆಯ ನೆಪದಲ್ಲಿ ಪತ್ರಬರಹಗಾರರು, ವಕೀಲರು ಹಾಗೂ ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ವಿಷಯಗಳು ತಿಳಿಯದ ಕಾರಣ ಇಲಾಖೆಯಿಂದ ರಹದಾರಿ ಪಡೆದಿರುವ ಪತ್ರ ಬರಹಗಾರರು ಹಾಗೂ ಜನಸಾಮಾನ್ಯರು ತೀರ್ವ ತೊಂದರೆಯನ್ನು ಅನುಭವಿಸುವಂತಾಗಿದೆ. ಆದ ಕಾರಣ ಉನ್ನತ ಅಧಿಕಾರಿಗಳು ಹಾಗೂ ಸಚಿವರಿಗೆ ಮನದಟ್ಟು ಮಾಡುವ ಮೂಲಕ ಜನಸಾಮಾನ್ಯರ ನೋಂದಣಿ ಪ್ರಕ್ರಿಯೆಯನ್ನು ಪತ್ರ ಬರಹಗಾರರು ಸುಲಲಿತವಾಗಿ ನಡೆಸಲು ಅನುವು ಮಾಡಿಕೊಡಬೇಕೆಂದು ಪ್ರತಿಭಟನೆಕಾರರು ಒತ್ತಾಯಿಸಿದರು…