ಮಾರಕಾಸ್ತ್ರಗಳಿಂದ ವ್ಯಕ್ತಿ ಬರ್ಬರ ಕೊಲೆ…ಹಂತಕರ ಪತ್ತೆಗೆ ಬಲೆ ಬೀಸಿದ ಪೊಲೀಸರು…
- Crime
- December 13, 2025
- No Comment
- 7

ಮಾರಕಾಸ್ತ್ರಗಳಿಂದ ವ್ಯಕ್ತಿ ಬರ್ಬರ ಕೊಲೆ…ಹಂತಕರ ಪತ್ತೆಗೆ ಬಲೆ ಬೀಸಿದ ಪೊಲೀಸರು…
ಟಿ.ನರಸೀಪುರ,ಡಿ13,Tv10 ಕನ್ನಡ
ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಹೊಸ ತಿರುಮಕೂಡಲು ನಿವಾಸಿ ವಿನೋದ್ (40) ಕೊಲೆಯಾದ ವ್ಯಕ್ತಿ. ಪಟ್ಟಣದ ಪ್ರಮುಖ ಸ್ಥಳವಾದ ಪಿಟೀಲು ಚೌಡಯ್ಯ ಸರ್ಕಲ್ ಬಳಿ ಇರುವ ಅಂಡರ್‌ಪಾಸ್‌ನಲ್ಲಿ ಘಟನೆ ನಡೆದಿದೆ.ಟಿ. ನರಸೀಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಶ್ವಾನ ದಳ ಭೇಟಿ ನೀಡಿದೆ. ಟಿ. ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.