ಹನೂರು : ಬಾಳೆಗೊನೆ ಕಟಾವು ಮಾಡಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬುದುವಾರ ರಾತ್ರಿ ಎಂಟು ಗಂಟೆಯಲ್ಲಿ ಜರುಗಿದೆ.

ಹನೂರು : ಬಾಳೆಗೊನೆ ಕಟಾವು ಮಾಡಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬುದುವಾರ ರಾತ್ರಿ ಎಂಟು ಗಂಟೆಯಲ್ಲಿ ಜರುಗಿದೆ.

ಹನೂರು : ಬಾಳೆಗೊನೆ ಕಟಾವು ಮಾಡಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬುದುವಾರ ರಾತ್ರಿ ಎಂಟು ಗಂಟೆಯಲ್ಲಿ ಜರುಗಿದೆ.

ತಮಿಳುನಾಡಿನ ಈರೋಡ್ ಜಿಲ್ಲೆ ಸತ್ತಿ ತಾಲೂಕಿನ ಮಾಕನ ಪಾಳ್ಯ ಗ್ರಾಮದ ಶಿವಮೂರ್ತಿ (50)ಆನೆ ದಾಳಿಗೆ ಮೃತಪಟ್ಟ ವ್ಯಕ್ತಿಯಾಗಿದ್ದಾನೆ.

ಘಟನೆಯ ವಿವರ : ಹನೂರು ತಾಲೂಕಿನ ಹೂಗ್ಯಂ ಗ್ರಾಮದ ಜಮೀನೊಂದರಲ್ಲಿ ಕಟಾವಿಗೆ ಬಂದಿದ್ದ ಬಾಳೆಗೊನೆಯನ್ನು ಕಟಾವು ಮಾಡಿ ಕೆಲಸ ಮುಗಿದ ನಂತರ ಸ್ವಗ್ರಾಮಕ್ಕೆ ಎರಡು ಬೈಕಿನಲ್ಲಿ ನಾಲ್ವರು ಕೂಲಿ ಕಾರ್ಮಿಕರು ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಕಾಡಾನೆ ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಶಿವಮೂರ್ತಿ ಮೇಲೆ ದಾಳಿ ನಡೆಸಿದೆ. ಸವಾರ ದ್ವಿಚಕ್ರವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ ಶಿವಮೂರ್ತಿ ಕಾಡಾನೆ ದಾಳಿಗೆ ಸ್ಥಳದಲ್ಲಿ ಮೃತಪಟ್ಟಿದ್ದಾನೆ.

ದ್ವಿಚಕ್ರ ವಾಹನ ಸವಾರನ ಮೇಲೆ ದಾಳಿ ನಡೆಸಿದ ತಾಯಿ ಮತ್ತು ನಾಲ್ಕು ಆನೆ ಮರಿಗಳು ಹಳ್ಳದ ಸಮೀಪದಲ್ಲಿಯೇ ಬೀಡು ಬಿಟ್ಟಿರುವುದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡು ರಸ್ತೆ ಮೂಲಕ ಹೋಗುವವರಿಗೆ ನಿರ್ಬಂಧ ವಿಧಿಸಿದ್ದಾರೆ.

ಈ ಸಂಬಂಧ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಭಾಸ್ಕರ್, ಹೂಗ್ಯ ವಲಯ ಅರಣ್ಯ ಅಧಿಕಾರಿ ಜಿತೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಂತರ ಮೃತಪಟ್ಟ ವ್ಯಕ್ತಿಯ ಶವವನ್ನು ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.

ಈ ಸಂಬಂಧ ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ :ವಿಜಯ್ ಕುಮಾರ್. ಕಾಂಚಳ್ಳಿ /ಹನೂರು

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *