ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

  • Crime
  • December 19, 2025
  • No Comment
  • 81

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಹುಣಸೂರು,ಡಿ19,Tv10 ಕನ್ನಡ

ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ ದುರ್ದೈವಿ. ಖಾಜಾಪೀರ್ ಸ್ನೇಹಿತ ನಗರದ ಮುಸ್ಲಿಂಬ್ಲಾಕ್‌ನ ಜಾವಿದ್ ಹಾಗೂ ಇನಾಯತುಲ್ಲಾ ಬಂಧಿತ ಕೊಲೆ ಆರೋಪಿಗಳು.
ಆಟೋ ಚಾಲಕ ಹಾಗೂ ಲೋಡರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಖಾಜಾಪೀರ್ ಆರೋಪಿಗಳಾದ ಜಾವಿದ್ ಹಾಗೂ ಇನಾಯತುಲ್ಲಾರವರು ಸ್ನೇಹಿತರಾಗಿದ್ದು ಕುಡಿತದ ದಾಸರಾಗಿದ್ದರು.ಜಾವಿದ್ ವ್ಯಕ್ತಿಯೊಬ್ಬರಿಂದ 15ಸಾವಿರ ರೂ ಸಾಲ ಪಡೆದಿದ್ದ.ಸಾಲ ಮರುಪಾವತಿಸಲು ವಿಫಲನಾದ ಕಾರಣ ಜಾವಿದ್‌ನ ಬೈಕನ್ನು ವಶಕ್ಕೆ ಪಡೆದು ಸಾಲ ತೀರಿಸಿ ವಾಪಸ್ ಪಡೆಯುವಂತೆ ವಾರ್ನಿಂಗ್ ಕೊಟ್ಟಿದ್ದರು.
ಬೈಕ್ ಕಿತ್ತುಕೊಳ್ಳಲು ಕೊಲೆಯಾದ ಖಾಜಾಪೀರ್ ಕಾರಣವಾಗಿದ್ದಾನೆಂದು ಗುರುವಾರ ಮದ್ಯ ರಾತ್ರಿ ಮಂಟಿ ಸರ್ಕಲ್ ಬಳಿಯಲ್ಲಿ ಮೂವರ ನಡುವೆ ಜಗಳವಾಗಿದೆ. ಕುಡಿದ ಮತ್ತಿನಲ್ಲಿ ಮರದ ರಿಪೀಸ್ ಪಟ್ಟಿಯಲ್ಲಿ ಬಡಿದಾಡಿಕೊಂಡಿದ್ದು, ತೀವ್ರ ಪೆಟ್ಟು ಬಿದ್ದಿದ್ದ ಖಾಜಾಪೀರ್ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಈ ಸಂಬಂಧ ಹುಣಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃತ್ಯ ನಡೆದ ಸ್ಥಳಕ್ಕೆ ಎಸ್.ಪಿ.ವಿಷ್ಣುವರ್ಧನ್, ಡಿವೈಎಸ್‌ಪಿ. ರಾಜು, ಇನ್ಸ್ಫೆಕ್ಟರ್ ಸಂತೋಷ್ ಕಶ್ಯಪ್ ಭೇಟಿ ಇತ್ತು ಪರಿಶೀಲಿಸಿದರು. ಅರೋಪಿಗಳನ್ನು ನಗರದ ಎಪಿಎಂಸಿ ಮಾರುಕಟ್ಟೆ ಬಳಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *