ಡಿಸಿಎಫ್ ಪರಮೇಶ್ ಗೆ ಲೋಕಾ ಶಾಕ್…ಅಕ್ರಮ ಆಸ್ತಿ ಗಳಿಕೆ ಆರೊಪ…ಮನೆ,ಕಚೇರಿ,ಸಂಬಂಧಿಕರ ಮನೆ ಮೇಲೆ ದಾಳಿ…

ಡಿಸಿಎಫ್ ಪರಮೇಶ್ ಗೆ ಲೋಕಾ ಶಾಕ್…ಅಕ್ರಮ ಆಸ್ತಿ ಗಳಿಕೆ ಆರೊಪ…ಮನೆ,ಕಚೇರಿ,ಸಂಬಂಧಿಕರ ಮನೆ ಮೇಲೆ ದಾಳಿ…

  • Crime
  • December 30, 2025
  • No Comment
  • 93

ಡಿಸಿಎಫ್ ಪರಮೇಶ್ ಗೆ ಲೋಕಾ ಶಾಕ್…ಅಕ್ರಮ ಆಸ್ತಿ ಗಳಿಕೆ ಆರೊಪ…ಮನೆ,ಕಚೇರಿ,ಸಂಬಂಧಿಕರ ಮನೆ ಮೇಲೆ ದಾಳಿ…

ಮೈಸೂರು,ಡಿ30,Tv10 ಕನ್ನೆ

ಅಕ್ರಮ ಆಸ್ತಿ ಗಳಿಸಿರುವ ಆರೋಪ ಹೊತ್ತ ಮೈಸೂರು ಅರಣ್ಯ ಇಲಾಖೆ ಡಿಸಿಎಫ್ ಪರಮೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.ಪರಮೇಶ್ ರವರು ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ,ಮನೆ ಹಾಗೂ ಸಂಬಂಧಿಕರ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಮೈಸೂರು ಭಾಗದ ಡಿಸಿಎ್ ಪರಮೇಶ್ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ್ದರೆಂಬ ಆರೋಪಕ್ಕೆ ಗುರಿಯಾಗಿದ್ದು, ಈ ಕುರಿತು ದೂರು ದಾಖಲಾಗಿತ್ತು. ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಅವರ ನಿರ್ದೇಶನದಂತೆ ಇಂದು ಏಕಕಾಲದಲ್ಲಿ ದಾಳಿ ನಡೆಸಲಾಯಿತು.ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯಭವನದ ಕಛೇರಿ, ವಸತಿಗೃಹ, ಹುಣಸೂರು ರಸ್ತೆಯಲ್ಲಿರುವ ಆದಿತ್ಯ ಲೇಔಟ್‌ನ ಮನೆ, ಬೋಗಾದಿ 2ನೇ ಹಂತದಲ್ಲಿರುವ ಸಹೋದರ ಜಗದೀಶ್ ಮನೆ ಹಾಗೂ ಬೆಂಗಳೂರಿನ ಬನಶಂಕರಿಯಲ್ಲಿರುವ ಅತ್ತೆ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯಚರಣೆ ನಡೆಸಿದ್ದಾರೆ.ಆಸ್ತಿ ಸಂಬಂಧ ಕೆಲ ಮಹತ್ವದ ದಾಖಲೆಗಳು ವಶಪಡಿಸಿಕೊಂಡಿದ್ದಾರೆ.
ಕಾರ್ಯಚರಣೆಯಲ್ಲಿ ಮೈಸೂರು ಲೋಕಾಯುಕ್ತ ಡಿವೈಎಸ್ಪಿ ಅರಗ ಶೈಲೇಂದ್ರ, ಕೊಡಗು ಲೋಕಾಯುಕ್ತ ಡಿವೈಎಸ್ಪಿ ದಿನಕರ್ ಶೆಟ್ಟಿ, ಇನ್ಸ್‌ಪೆಕ್ಟರ್ ಗಳಾದ ಗಿರೀಶ್, ಜಯ ಕುಮಾರ್, ಶಾಂತಿನಾಥ ಹೊನ್ನೂರು, ಬೆಂಗಳೂರು ಲೋಕಾಯುಕ್ತ ಇನ್ಸ್‌ಪೆಕ್ಟರ್ ಆನಂದ್ ಹಾಗೂ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದಾರೆ…

Spread the love

Related post

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…

Leave a Reply

Your email address will not be published. Required fields are marked *