ಸಿಎಂ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಧಂಕಿ…ಕೊಲೆ ಬೆದರಿಕೆ…ಅವಾಚ್ಯ ಶಬ್ದಗಳಿಂದ ನಿಂದನೆ…ಕರ್ತವ್ಯಕ್ಕೆ ಅಡ್ಡಿ…ಶಿಡ್ಲಘಟ್ಟ ಪ್ರಕರಣ ನೆನಪಿಸುವ ಘಟನೆ…ವ್ಯಕ್ತಿ ವಿರುದ್ದ FIR…Cr no 381/25

ಸಿಎಂ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಧಂಕಿ…ಕೊಲೆ ಬೆದರಿಕೆ…ಅವಾಚ್ಯ ಶಬ್ದಗಳಿಂದ ನಿಂದನೆ…ಕರ್ತವ್ಯಕ್ಕೆ ಅಡ್ಡಿ…ಶಿಡ್ಲಘಟ್ಟ ಪ್ರಕರಣ ನೆನಪಿಸುವ ಘಟನೆ…ವ್ಯಕ್ತಿ ವಿರುದ್ದ FIR…Cr no 381/25

ಸಿಎಂ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಧಂಕಿ…ಕೊಲೆ ಬೆದರಿಕೆ…ಅವಾಚ್ಯ ಶಬ್ದಗಳಿಂದ ನಿಂದನೆ…ಕರ್ತವ್ಯಕ್ಕೆ ಅಡ್ಡಿ…ಶಿಡ್ಲಘಟ್ಟ ಪ್ರಕರಣ ನೆನಪಿಸುವ ಘಟನೆ…ವ್ಯಕ್ತಿ ವಿರುದ್ದ FIR…

ಮೈಸೂರು,ಜ17,Tv10 ಕನ್ನಡ

ಸರ್ಕಾರದ ಸ್ವಾಧೀನಕ್ಕೆ ಪಡೆಯಬೇಕಾದ ಜಮೀನು ಪರಿಶೀಲನೆ ಮಾಡಲು ತೆರಳಿದ ಗ್ರಾಮ ಆಡಳಿತ ಮಹಿಳಾ ಅಧಿಕಾರಿ ಹಾಗೂ ಗ್ರಾಮ ಸಹಾಯಕನಿಗೆ ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಬೆಳಕಿಗೆ ಬಂದಿದೆ.ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯ ವಿರುದ್ದ ಮಹಿಳಾ ಅಧಿಕಾರಿ ರಕ್ಷಣೆ ಕೋರಿ ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಗ್ರಾಮ ಆಡಳಿತಾಧಿಕಾರಿ ಬಂಡೀಪಾಳ್ಯ ವೃತ್ತದ ಜಿ ಭವ್ಯ ಹಾಗೂ ಗ್ರಾಮ ಸಹಾಯಕ ನವೀನ್ ಕುಮಾರ್ ಎಂಬುವರ ಮೇಲೆ ವರುಣಾ ಹೋಬಳಿ ಗುಡಮಾದನಹಳ್ಳಿ ಗ್ರಾಮದ ನಿವಾಸಿ ಜಿಎಂ ಪುಟ್ಟಸ್ವಾಮಿ ಎಂಬುವರು ಬೆದರಿಕೆ ಹಾಕಿದ್ದಾರೆ.ಧಂಕಿ ಹಾಕಿ ಕೊಲೆ ಬೆದರಿಕೆ ಹಾಕಿದ ದೃಶ್ಯಗಳನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಲಾಗಿದೆ.ಈ ವೇಳೆ ಪುಟ್ಟಸ್ವಾಮಿ ಬಲವಂತವಾಗಿ ಮೊಬೈಲ್ ಕಿತ್ತುಕೊಂಡು ವಿಡಿಯೋಗಳನ್ನ ಡಿಲೀಟ್ ಮಾಡಿದ್ದಾರೆ.

ವರುಣಾ ಹೋಬಳಿಯ ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ ಮಾದರಿಯ ಆಸ್ಪತ್ರೆ ನಿರ್ಮಿಸಲು ಸರ್ವೆ ನಂ.8 ರಲ್ಲಿ 5 ಎಕ್ರೆ 05 ಗುಂಟೆ,ಸರ್ವೆ ನಂ.60 ರಲ್ಲಿ 6 ಎಕ್ರೆ 10 ಗುಂಟೆ ಹಾಗೂ ಸರ್ವೆ ನಂ.68 ರಲ್ಲಿ 8 ಎಕ್ರೆ 25 ಗುಂಟೆ ಒಟ್ಟು 20 ಎಕ್ರೆ ಜಾಗ ಮೀಸಲಿಡಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಕನಸಿನ ಯೋಜನೆ ಇದಾಗಿದೆ.ತಮ್ಮ ಸ್ವಕ್ಷೇತ್ರದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಸಿದ್ದರಾಮಯ್ಯ ಆಸಕ್ತಿ ತೋರಿದ ಹಿನ್ನಲೆ ಜಾಗ ಗುರುತಿಸಿ ಸ್ವಾಧೀನ ಪ್ರಕ್ರಿಯೆ ಆರಂಭಿಸುವಂತೆ ಆದೇಶವಾಗಿದೆ.ಈ ಹಿನ್ನಲೆ ಗುಡಮಾದನಹಳ್ಳಿಯಲ್ಲಿ ಗುರುತಿಸಲಾದ ಜಮೀನು ಪರಿಶೀಲನೆಗೆ ಮಹಿಳಾ ಅಧಿಕಾರಿ ಜಿ ಭವ್ಯ ಹಾಗೂ ನವೀನ್ ಕುಮಾರ್ ತೆರಳಿದ್ದರು.ಈ ವೇಳೆ ಸದರಿ ಜಮೀನಿನಲ್ಲಿ ಅನಧಿಕೃತವಾಗಿ ಅಡಿಕೆ ತೋಟ ನಿರ್ಮಿಸಿಕೊಂಡಿದ್ದ ಪುಟ್ಟಸ್ವಾಮಿ ಧಿಢೀರ್ ಪ್ರತ್ಯಕ್ಷವಾಗಿ ಯಾರನ್ನ ಕೇಳಿ ನಿಮ್ಹಾನ್ಸ್ ಆಸ್ಪತ್ರೆಗೆ ಜಮೀನು ಮಂಜೂರು ಮಾಡಿದ್ದೀರಿ..? ಮೊದಲು ತಹಸೀಲ್ದಾರ್ ತಲೆ ತೆಗೆಯಬೇಕು..ನಿನ್ನನ್ನ ಇಲ್ಲಿಯೇ ಕೊಂದು ಹಾಕುತ್ತೇನೆ ಎಂದು ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.ಪುಟ್ಟಸ್ವಾಮಿಯ ದೌರ್ಜನ್ಯ ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಗ್ರಾಮ ಸಹಾಯಕ ನವೀನ್ ಕುಮಾರ್ ಗೂ ಕೊಲೆ ಬೆದರಿಕೆ ಹಾಕಿ ಮೊಬೈಲ್ ಕಿತ್ತುಕೊಂಡು ವಿಡಿಯೋ ಡಿಲೀಟ್ ಮಾಡಿಸಿದ್ದಾನೆ.

ಸರ್ಕಾರಿ ಕೆಲಸವನ್ನ ನಿರ್ಭಯವಾಗಿ ನಿರ್ವಹಿಸಲು ಮಹಿಳಾ ಸಿಬ್ಬಂದಿಯಾದ ನನಗೆ ಭಯದ ವಾತಾವರಣ ಉಂಟು ಮಾಡಿರುವ ಪುಟ್ಟಸ್ವಾಮಿ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಭವ್ಯ ರವರು ಪ್ರಕರಣ ದಾಖಲಿಸಿ ತಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೆ ಶಿಡ್ಲಘಟ್ಟದಲ್ಲಿ ಮಹಿಳಾ ಪೌರಾಯುಕ್ತೆ ಮೇಲೆ ಕಾಂಗ್ರೆಸ್ ಮುಖಂಡನೊಬ್ಬ ಧಂಕಿ ಹಾಕಿ ಬೆದರಿಸಿದ ಘಟನೆ ಮಾಸುವ ಮುನ್ನವೇ ಸಿಎಂ ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿ ವಿರುದ್ದ ಕೊಲೆ ಬೆದರಿಕೆ ಬಂದಿದೆ.ಸರ್ಕಾರಿ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಪಡಿಸುವ ವ್ಯಕ್ತಿಗಳಿಂದ ಅಧಿಕಾರಿಗಳಿಗೆ ರಕ್ಷಣೆ ಬೇಕಿದೆ.ಸಿಎಂ ಪ್ರತಿನಿಧಿಸುವ ಕ್ಷೇತ್ರದಲ್ಲೇ ಇಂತಹ ಘಟನೆ ನಡೆದರೆ ಉಳಿದ ಕ್ಷೇತ್ರಗಳ ಗತಿ ಏನು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *