ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ.

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ.

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ.

ಹನೂರು Tv10 ಕನ್ನಡ
07/02/2026.

ಹನೂರು :ರೈತಾಪಿ ವರ್ಗದ ಜನರು ಎಲ್ಲರೂ ಸಹ ಸಂಘಟನೆ ಮೂಲಕ ಸರ್ಕಾರದ ಸೌಲಭ್ಯ ಗಳನ್ನು ಪಡೆದುಕೊಳ್ಳಬೇಕು ಎಂದು ಹಸಿರು ಸೇನೆ ಹಾಗೂ ಸಾಮೂಹಿಕ ನಾಯಕತ್ವದ ನಾಯಕ ಹೊನ್ನೂರು ಪ್ರಕಾಶ್ ತಿಳಿಸಿದರು.

ತಾಲೂಕಿನ ಅಂಬಿಕಾಪುರ ಮೇಡು ಗ್ರಾಮದಲ್ಲಿ ನೂತನ ಗ್ರಾಮ ಘಟಕವನ್ನು ಉದ್ಘಾಟನೆ ಮಾಡಿ ನಂತರ ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದಂತೆ ಮೊದಲು ಶಿಕ್ಷಣ ಪಡೆದುಕೊಳ್ಳಬೇಕು, ಸಂಘಟನೆ ಮಾಡಬೇಕು, ನಂತರ ಹೋರಾಟದ ಹಾದಿ ಹಿಡಿಯಬೇಕು. ಆ ದಿಸೆಯಲ್ಲಿ ಎಲ್ಲರೂ ಸಹ ಸಂಘಟನೆ ಮಾಡಿಕೊಳ್ಳುವ ಮೂಲಕ ತಮಗೆ ಸಿಗಬೇಕಾದ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕಿದೆ. ನಮ್ಮ ಜನರು ಸರಿಯಾದ ಮಾರ್ಗದರ್ಶನವಿಲ್ಲದೇ ರೈತ ತುಂಬಾ ನಷ್ಟದ ಹಾದಿಯಲ್ಲಿದ್ದಾನೆ.ಹಾಗಾಗಿ ರೈತರು ಮೊದಲು ಒಗ್ಗಟ್ಟಿನಲ್ಲಿ ಬಲವಿದೆ ಎಂಬುದನ್ನು ಅರಿತುಕೊಳ್ಳಬೇಕು.

ರೈತರ ಗತ್ತು ಪಾಲಿಸಿ : ರೈತರು ತಮಗಿರುವ ಗತ್ತುಗಳನ್ನು ಪಾಲಿಸಬೇಕು. ಎಲ್ಲರೂ ಒಗ್ಗಟ್ಟಿನಲ್ಲಿ ಮುಂದೆ ಬಂದು ತಮಗೆ, ಅರ್ಹ ಫಲಾನುಭವಿಗೆ ಸಿಗಬೇಕಾದ ಸೌಲಭ್ಯ ಪಡೆದುಕೊಳ್ಳಲು ಮುಂದಾಗಬೇಕಿದೆ. ಹಾಗಾಗಿ ತಮ್ಮ ಹೆಗಲ ಮೇಲೆ ಹಸಿರು ಟವೆಲ್ ಇರುವವರೆಗೂ ಸಹ ಯಾರಿಗೂ ಹೆದರುವ ಅವಶ್ಯಕತೆ ಇಲ್ಲ. ಒಳ್ಳೆಯ ಕೆಲಸಗಳಿಗೆ ಯಾವುದೇ ಆತಂಕ ಪಡುವ ಅಗತ್ಯ ಇಲ್ಲ. ರೈತನಿಗೆ ಇರುವ ನೆಮ್ಮದಿ ಜೀವನ ಯಾರಿಗೂ ಸಹ ಇಲ್ಲ, ಅತ್ಯಂತ ನೆಮ್ಮದಿ ಜೀವನ ನಡೆಸುತ್ತಿರುವ ವ್ಯಕ್ತಿ ಎಂದರೆ ನಾವೇ ಎಂದು ತಿಳಿಸಿದರು.

ಸಾವಯವ ಗೊಬ್ಬರ ಬಳಕೆ ಮಾಡಿ : ರೈತರು ರಾಸಾಯನಿಕ ಗೊಬ್ಬರ ಬಳಕೆ ಬದಲು ಸಾವಯವ ಗೊಬ್ಬರ ಬಳಕೆ ಮಾಡಲು ಮುಂದಾಗಬೇಕಿದೆ. ಇದರ ಮೂಲಕ ತಮ್ಮ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬೇಕು. ಮಿಶ್ರ ಬೇಸಾಯ ಮಾಡಿಕೊಳ್ಳಬೇಕು. ರೈತರು ಸ್ವಲ್ಪ ಜಾಗ್ರತೆ ಯಿಂದ ಬೆಳೆಯನ್ನು ಬೆಳೆದರೆ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.

ಇದೆ ಸಂದರ್ಭದಲ್ಲಿ ತಾಲೂಕು ಘಟಕದ ಅಧ್ಯಕ್ಷ ಚಂಗಡಿ ಕರಿಯಪ್ಪ,ಗುಂಡ್ಲುಪೇಟೆ ಶಶಿಕುಮಾರ್, ದೊಡ್ದಾಣೆ ಮಾದೇವ್, ಜಿಲ್ಲಾ ಕಾರ್ಯದರ್ಶಿ ಶಾಂತಕುಮಾರ್, ಮುನೇಶ್, ನವೀನ್, ಮಹೇಶ್,
ಶ್ರೀನಿವಾಸ್, ವೇಲುಸ್ವಾಮಿ, ಪಳನಿಸ್ವಾಮಿ, ಮುರುಗೇಶ್, ಪ್ರಕಾಶ್, ಸತ್ಯಮೂರ್ತಿ, ಸೆಲ್ವರಾಜು ಅಯ್ಯಮ್ ಪೆರುಮಾಳ್,ಸೇರಿದಂತೆ ಇನ್ನಿತರರು ಇದ್ದರು.

ವರದಿ :ವಿಜಯ್ ಕುಮಾರ್. ಕಾಂಚಳ್ಳಿ /ಹನೂರು.

Spread the love

Related post

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…

Leave a Reply

Your email address will not be published. Required fields are marked *