ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ ಮಹದೇವಸ್ವಾಮಿ ನ್ಯಾಯಾಧೀಶರಾಗಿ ಆಯ್ಕೆ – ಹೆಮ್ಮೆಯ ಕ್ಷಣ

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ ಮಹದೇವಸ್ವಾಮಿ ನ್ಯಾಯಾಧೀಶರಾಗಿ ಆಯ್ಕೆ – ಹೆಮ್ಮೆಯ ಕ್ಷಣ

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ ಮಹದೇವಸ್ವಾಮಿ ನ್ಯಾಯಾಧೀಶರಾಗಿ ಆಯ್ಕೆ – ಹೆಮ್ಮೆಯ ಕ್ಷಣ

ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜಿನ ಹಿರಿಯ ವಿದ್ಯಾರ್ಥಿಯಾದ ಉಪ್ಪನಹಳ್ಳಿ ಗ್ರಾಮದ ಎಂ.ಮಹದೇವಸ್ವಾಮಿ ಅವರು ನ್ಯಾಯಾಂಗ ಇಲಾಖೆಯಲ್ಲಿ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿರುವುದು ಕಾಲೇಜಿಗೆ ಹೆಮ್ಮೆಯ ಸಂಗತಿಯಾಗಿ ಪರಿಣಮಿಸಿದೆ.

ಕರ್ನಾಟಕ ನ್ಯಾಯಾಂಗ ಸೇವಾ ಆಯೋಗ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಉತ್ತಮ ಸಾಧನೆ ಮಾಡಿರುವ ಅವರು ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದು ಕಾಲೇಜಿನಲ್ಲಿ ಎಂ ಮಹದೇವಸ್ವಾಮಿ ರವರನ್ನು ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮಹದೇವಸ್ವಾಮಿ ರವರು ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡು ನಾನು ಈ ಮಟ್ಟಕ್ಕೆ ಬರಬೇಕಾದರೆ ಕಾಲೇಜಿನ ಉಪನ್ಯಾಸಕರು ಮುಖ್ಯ ಕಾರಣ. ಹಾಗಾಗಿ ಅವರ ಬೋಧನೆ ಸಲಹೆಗಳನ್ನು ಸ್ಮರಣೆ ಮಾಡುತ್ತೇನೆ. ಮುಂದೆ ಪ್ರಾಮಾಣಿಕವಾಗಿ ಈ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಹೇಳಿದರು.

2004 ರಲ್ಲಿ ಅವರು ಈ ಕಾಲೇಜಿನಲ್ಲಿ ಪಿ ಯು ಸಿ ಕಲಾ ವಿಭಾಗದಲ್ಲಿ ಅಭ್ಯಾಸ ಮಾಡಿದ್ದು ತಮ್ಮ ಕಾಲೇಜು ದಿನಗಳಲ್ಲಿ ವಿದ್ಯಾಭ್ಯಾಸದ ಜೊತೆಗೆ ಶಿಸ್ತಿನ ಜೀವನ, ಪರಿಶ್ರಮ ಮತ್ತು ನಿಷ್ಠೆಯಿಂದ ಗುರುತಿಸಿಕೊಂಡಿದ್ದರು.ಮಹಾರಾಜ ಕಾಲೇಜಿನಲ್ಲಿ ಪದವಿ ಪೂರ್ಣಗೊಳಿಸಿದ ನಂತರ ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ನ್ಯಾಯಾಂಗ ಸೇವೆಗೆ ಪ್ರವೇಶಿಸಲು ನಿರಂತರವಾಗಿ ಏಳು ಬಾರಿ ಪ್ರಯತ್ನ ನಡೆಸಿದ ಪ್ರಯತ್ನ ನಡೆಸಿದ ಅವರು ಈಗ ನ್ಯಾಯಾಧೀಶರಾಗಿ ಆಯ್ಕೆಯಾಗಿರುವುದು ಯುವಕರಿಗೆ ಪ್ರೇರಣೆಯಾಗುವಂತಹ ಸಾಧನೆಯಾಗಿದೆ.

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *