ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು )

ಪಾರ್ವತಮ್ಮ N ದಂಪತಿಗಳ ಮಗಳಾದ ರಮ್ಯಾರವರು ಗ್ರಾಮೀಣ ಕುಟುಂಬದಲ್ಲಿ ಜನಿಸಿದ ಬಾಲ್ಯದಿಂದಲೇ ವಿದ್ಯಾಭ್ಯಾಸದತ್ತ ಹೆಚ್ಚಿನ ಆಸಕ್ತಿ ತೋರಿದವರು. ಪ್ರಾಥಮಿಕ ಶಿಕ್ಷಣವನ್ನು ಸ. ಹಿ. ಪ್ರಾ ಶಾಲೆ, ಕಿರುಗುಂದ ಮತ್ತು ಪ್ರೌಢಶಿಕ್ಷಣವನ್ನು ಶ್ರೀ ಮೊರಾರ್ಜಿ ದೇಸಾಯಿ ರೆಸಿಡೆನ್ಸಿಯಲ್ ಸ್ಕೂಲ್, ಹೊಸಕೋಟೆ , ಪಿ ಯು ಸಿ ಮೈಸೂರಿನ ಮಹಾರಾಣಿ ಕಾಲೇಜು ಉತ್ತಮ ಸಾಧನೆಯೊಂದಿಗೆ ಪೂರ್ಣಗೊಳಿಸಿದ ಅವರು, ನಂತರ ಕಾನೂನು ಪದವಿಯನ್ನು ಮಹಾಜನ ಕಾನೂನು ಕಾಲೇಜು ಮತ್ತು LLM ಪದವಿಯನ್ನು ಮಾನಸ ಗಂಗೋತ್ರಿನಲ್ಲಿ ಮುಗಿಸಿ ತಾವು ನ್ಯಾಯಧಿಶರಾಗಬೇಕೆಂಬ ತಮ್ಮ ಗುರಿಯನ್ನು ಸ್ಪಷ್ಟವಾಗಿ ನಿರ್ಧರಿಸಿಕೊಂಡಿದ್ದರು.

ನ್ಯಾಯಾಧೀಶರಾಗಿ ಆಯ್ಕೆಯಾದ ಸಂದರ್ಭದಲ್ಲಿ ಬಾಲಕರ ಸ ಪ ಪೂ ಕಾಲೇಜಿನಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಈ ಸಾಧನೆ ಕೇವಲ ವೈಯಕ್ತಿಕ ಯಶಸ್ಸಲ್ಲ ಸಮಾಜದಲ್ಲಿನ ಎಲ್ಲಾ ಮಹಿಳೆಯರಿಗೂ ಪ್ರೇರಣೆಯಾಗಿದೆ. ಮಹಿಳೆಯರು ಯಾವ ಕ್ಷೇತ್ರದಲ್ಲಾದರೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬಹುದು ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆಯಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಇದು ಒಂದು ಮಾದರಿಯಾಗಿದೆ ಎಂದು ಹೇಳಿದರು. ಶಿಕ್ಷಕರು ಮತ್ತು ಉಪನ್ಯಾಸಕರ ಸಲಹೆ,ಮಾರ್ಗದರ್ಶನ ಈ ಹಂತ ತಲುಪಲು ಸಾದ್ಯ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಸಿ.ಆರ್.ದಿನೇಶ್ ರವರು ಮಾತನಾಡಿ‌ " ‌ಇಂತಹ ಸಾಧನೆಗಳು ಸಮಾಜದಲ್ಲಿ ಮಹಿಳಾ ಸಬಲೀಕರಣಕ್ಕೆ ಬಲ ತುಂಬುತ್ತವೆ. ಯುವತಿಯರು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಾಧ್ಯ” ಎಂದು ಹೇಳಿದರು. ನ್ಯಾಯಾಂಗ ಕ್ಷೇತ್ರದಲ್ಲಿ ಮಹಿಳೆಯರ ಪ್ರಮಾಣ ಹೆಚ್ಚುತ್ತಿರುವುದು ಸಮಾನತೆಯ ದಿಕ್ಕಿನಲ್ಲಿ ದೊಡ್ಡ ಹೆಜ್ಜೆಯಾಗಿದೆ. ರಮ್ಯಾ ಅವರ ಈ ಸಾಧನೆ ನ್ಯಾಯ ವ್ಯವಸ್ಥೆಯಲ್ಲಿ ಮಹಿಳೆಯರ ಪಾತ್ರವನ್ನು ಮತ್ತಷ್ಟು ಬಲಪಡಿಸುವಂತಹಾಗಿದೆ ಎಂದು ಹೇಳಿದರು.

ಕಾಲೇಜಿನ ಉಪನ್ಯಾಸಕರಾದ ಡಾ.ಕೆ.ಮಾಲತಿ,ಡಾ.ಟಿ.ಕೆ.ರವಿ,ರೂಪ,ಮೀನಾ,ಬಿ.ಎಸ್ ನಾಗರಾಜ,ರವೀಂದ್ರಕುಮಾರ್, ಸುಭಾಶ್ ಮತ್ತು ಸಿಬ್ಬಂದಿ ವರ್ಗದವರು ಅವರಿಗೆ ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಸೇವಾ ಅವಧಿ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *