ಮೈಸೂರಿನಲ್ಲಿ ದೆಹಲಿ ಪೊಲೀಸರ ಕಾರ್ಯಾಚರಣೆ…ಹುಸಿ ಬಾಂಬ್ ಸಂದೇಶಗಳ ರೂವಾರಿ ಬಂಧನ…

ಮೈಸೂರಿನಲ್ಲಿ ದೆಹಲಿ ಪೊಲೀಸರ ಕಾರ್ಯಾಚರಣೆ…ಹುಸಿ ಬಾಂಬ್ ಸಂದೇಶಗಳ ರೂವಾರಿ ಬಂಧನ…

  • Crime
  • March 28, 2026
  • No Comment
  • 315

ಮೈಸೂರಿನಲ್ಲಿ ದೆಹಲಿ ಪೊಲೀಸರ ಕಾರ್ಯಾಚರಣೆ…ಹುಸಿ ಬಾಂಬ್ ಸಂದೇಶಗಳ ರೂವಾರಿ ಬಂಧನ…

ಮೈಸೂರು,ಮಾ28,Tv10 ಕನ್ನಡ

ಹುಸಿಬಾಂಬ್ ಸಂದೇಶಗಳನ್ನ ಕಳಿಸಿ ಆತಂಕ ಸೃಷ್ಟಿಸುತ್ತಿದ್ದ ವ್ಯಕ್ತಿ ದೆಹಲಿ ಪೊಲೀಸರ ಅತಿಥಿಯಾಗಿದ್ದಾನೆ.ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಡಗಿ ಕುಳಿತು ನಿಗೂಢವಾಗಿ ಬಾಂಬ್ ಸ್ಪೋಟಿಸುವ ಸಂದೇಶಗಳನ್ನ ಕಳಿಸಿ ಬೆದರಿಕೆ ಹಾಕುತ್ತಿದ್ದ ವ್ಯಕ್ತಿ ಅರೆಸ್ಟ್ ಆಗಿದ್ದಾನೆ.ಮೈಸೂರಿನ ಪ್ರತಿಷ್ಠಿತ ಬೃಂದಾವನ ಬಡಾವಣೆ ಎರಡನೇ ಹಂತ 6 ನೇ ಕ್ರಾಸ್ ನ ಮನೆಯೊಂದರಿಂದ ಕಾರ್ಯಾಚರಣೆ ನಡೆಸುತ್ತಿದ್ದ.ಶ್ರೀನಿವಾಸ್ ಬಂಧಿತ ಆರೋಪಿ.ಇತ್ತೀಚೆಗೆ ಸರ್ಕಾರಿ ಕಚೇರಿಗಳು,ಶಾಲಾ ಕಟ್ಟಡಗಳು ಹಾಗೂ ನ್ಯಾಯಾಲಯಗಳಿಗೆ ಬಾಂಬ್ ಸ್ಪೋಟವಾಗುವ ಬೆದರಿಕೆ ಸಂದೇಶ ರವಾನೆಯಾಗಿ ಆತಂಕ ಸೃಷ್ಟಿಯಾಗಿತ್ತು.ಒಂದೇ ತಿಂಗಳಿನಲ್ಲಿ ಹಲವು ಬಾರಿ ಮೇಲ್ ಮೂಲಕ ಸಂದೇಶ ರವಾನೆ ಆಗಿದೆ.ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಸರ್ಕಾರ ಕಿಡಿಗೇಡಿಯನ್ನ ಬಂಧಿಸಲು ಕಾರ್ಯಾಚರಣೆಗೆ ಮುಂದಾಗಿದೆ. ಮೈಸೂರಿನಿಂದ ಕಾರ್ಯಾಚರಣೆ ಮಾಡಿರುವ ಮಾಹಿತಿ ದೆಹಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ.ದೆಹಲಿ ಪೊಲೀಸರ ತಂಡ ಧಿಢೀರ್ ದಾಳಿ ನಡೆಸಿ ಆರೋಪಿ ಶ್ರೀನಿವಾಸ್ ನನ್ನು ಬಂಧಿಸಿದ್ದಾರೆ.ದೆಹಲಿ ಪೊಲೀಸರಿಗೆ ವಿವಿ ಪುರಂ ಠಾಣೆ ಪೊಲೀಸರು ಸಾಥ್ ನೀಡಿದ್ದಾರೆ.ಆರೋಪಿ ಶ್ರೀನಿವಾಸ್ ನನ್ನು ಹೆಚ್ಚಿನ ವಿಚಾರಣೆಗೆ ದೆಹಲಿ ಪೊಲೀಸರು ಕರೆದೊಯ್ಯಲಿದ್ದಾರೆ.ಆರೋಪಿಯ ಮನೆಯಲ್ಲಿ ಹಲವು ಸಿಮ್ ಗಳು ಹಾಗೂ ಲ್ಯಾಪ್ ಟ್ಯಾಪ್ ಸೀಜ್ ಮಾಡಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *