ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಹೋಟೆಲ್ ನಿರ್ಮಾಣ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಸ್ಥಳೀಯ ರೈತರ ಆರೋಪದಂತೆ ಸೋಮಣ್ಣ ಎಂಬವರು ಸುಮಾರು 20 ಗುಂಟೆ ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಕಾರ್ಯ ನಡೆಸುತ್ತಿದ್ದಾರೆ.

ಈ ಜಾಗ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಗೆ ಸೇರಿದ್ದು, ಯಾವುದೇ ಅನುಮತಿ ಇಲ್ಲದೆ ನಿರ್ಮಾಣ ನಡೆಯುತ್ತಿರುವುದರಿಂದ ಸಾರ್ವಜನಿಕರಿಗೆ ಹಾಗೂ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ರೈತರು ತಿಳಿಸಿದ್ದಾರೆ. ಈ ಕುರಿತು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರೂ ಇನ್ನೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಕ್ರಮ ನಿರ್ಮಾಣದ ಬಗ್ಗೆ ಪ್ರಶ್ನಿಸಿದ ರೈತರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದು ಮಾತ್ರವಲ್ಲದೆ ಕೊಲೆ ಬೆದರಿಕೆ ಹಾಕಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. “ಇದು ನನ್ನ ಆಸ್ತಿ, ಸರ್ಕಾರ ಏನೂ ಮಾಡಲು ಸಾಧ್ಯವಿಲ್ಲ” ಎಂದು ಸೋಮಣ್ಣ ಹೇಳಿಕೊಂಡಿದ್ದಾರೆ ಎಂದು ರೈತರು ತಿಳಿಸಿದ್ದಾರೆ.

ಇದಲ್ಲದೆ, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್ ಅವರ ಬೆಂಬಲ ಇದೆ ಎಂದು ಆರೋಪಿತ ವ್ಯಕ್ತಿ ಹೇಳಿಕೊಳ್ಳುತ್ತಿರುವುದರಿಂದ ಅಧಿಕಾರಿಗಳು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಅನುಮಾನವೂ ವ್ಯಕ್ತವಾಗಿದೆ.

ಸರ್ಕಾರಿ ಜಾಗ ರಕ್ಷಣೆ ಹಾಗೂ ರೈತರ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ರೈತರು ಒತ್ತಾಯಿಸಿದ್ದಾರೆ.

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *