ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ಹನೂರು Tv10 ಕನ್ನಡ.

ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ ಜನರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು ಮೂಲದ 10 ವರ್ಷದ ಹರ್ಷಿತ್ ಚಿರತೆ ದಾಳಿಗೆ ಬಲಿಯಾದ ಬಾಲಕ.

ಘಟನೆಯ ಬಳಿಕ ಭಕ್ತರು ಹಾಗೂ ಸಾರ್ವಜನಿಕರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾತ್ರಾರ್ಥಿಗಳ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇತ್ತೀಚಿನ ದಿನಗಳಲ್ಲಿ ಕಾಡುಪ್ರಾಣಿಗಳು ಜನವಸತಿ ಪ್ರದೇಶಗಳಿಗೆ ಬರುತ್ತಿರುವ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ನಾಗಮಲೆಯಂತಹ ಕಾಲುನಡಿಗೆಯ ಮಾರ್ಗಗಳಲ್ಲಿ ಭಕ್ತರ ಸುರಕ್ಷತೆ ಅತ್ಯಂತ ಅಗತ್ಯವಾಗಿದೆ. ಸಿಸಿಟಿವಿ ಅಳವಡಿಕೆ, ಅರಣ್ಯ ಸಿಬ್ಬಂದಿ ಹೆಚ್ಚಳ, ಎಚ್ಚರಿಕೆ ಫಲಕಗಳು ಹಾಗೂ ರಾತ್ರಿ ಪಾಳಿಯ ಕಾವಲು ವ್ಯವಸ್ಥೆ ಬಲಪಡಿಸುವ ಅಗತ್ಯ ಇದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮೃತ ಬಾಲಕನ ಕುಟುಂಬಕ್ಕೆ ಸರ್ಕಾರ ಮತ್ತು ಅರಣ್ಯ ಇಲಾಖೆ ತಕ್ಷಣ ಪರಿಹಾರ ನೀಡಬೇಕು. ಜೊತೆಗೆ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ.

ವರದಿ :ವಿಜಯ್ ಕುಮಾರ್. ಕಾಂಚಳ್ಳಿ

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *