ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ವೈದ್ಯೆ ಡಾ. ಪುಷ್ಪ ಅವರು ಮಹಿಳೆಯರು ಹಾಗೂ ಯುವತಿಯರಿಗೆ ಮುಟ್ಟು ವೃತು ಚಕ್ರದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಮಾಸಿಕ ಚಕ್ರವು ಮಹಿಳೆಯರ ಸಹಜ ದೈಹಿಕ ಪ್ರಕ್ರಿಯೆಯಾಗಿದ್ದು, ಇದರ ಬಗ್ಗೆ ಯಾವುದೇ ಮುಜುಗರ ಅಥವಾ ತಪ್ಪು ಕಲ್ಪನೆ ಇರಬಾರದು ಎಂದು ತಿಳಿಸಿದರು. ಮುಟ್ಟಿನ ಸಮಯದಲ್ಲಿ ವೈಯಕ್ತಿಕ ಸ್ವಚ್ಛತೆ ಕಾಪಾಡುವುದು, ಸ್ವಚ್ಛ ನ್ಯಾಪ್ಕಿನ್‌ಗಳ ಬಳಕೆ, ಪೌಷ್ಟಿಕ ಆಹಾರ ಸೇವನೆ ಹಾಗೂ ಆರೋಗ್ಯ ಸಮಸ್ಯೆಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಮುಟ್ಟು ಕುರಿತು ಅರಿವಿನ ಕೊರತೆ ಇರುವುದರಿಂದ ಮಹಿಳೆಯರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಾಗೃತಿ ಕಾರ್ಯಕ್ರಮಗಳು ಅಗತ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳೆಯರು ಮತ್ತು ಯುವತಿಯರು ಆರೋಗ್ಯ ಸಂಬಂಧಿತ ಹಲವು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಸಂಘದ ಸದಸ್ಯೆಯರು ಹಾಗೂ ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.

Spread the love

Related post

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…

Leave a Reply

Your email address will not be published. Required fields are marked *