ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಮೈಸೂರು,ಜುಲೈ11,Tv10 ಕನ್ನಡ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ಅಪ್ರತಿಮ ಗಾಯನದ ಮೂಲಕ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯ ಗೆದ್ದ ಗಾನ ಕೋಗಿಲೆ ಎಸ್. ಜಾನಕಿ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU) ಕುಲಪತಿ ಪ್ರೊ. ಎ.ಪಿ. ಜ್ಞಾನ ಪ್ರಕಾಶ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡದಲ್ಲಿ ಅತಿ ಹೆಚ್ಚು ಹಾಡುಗಳನ್ನು ಹಾಡಿ ಕನ್ನಡಿಗರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದ ಎಸ್. ಜಾನಕಿ ಅವರ ಅಗಲಿಕೆ ನಮ್ಮೆಲ್ಲರಿಗೂ ಅಪಾರ ನೋವು ತಂದಿದೆ. ಅವರ ಕಂಠಸಿರಿ, ಗಾಯನ ವೈಭವ ಮತ್ತು ಸಂಗೀತ ಪರಂಪರೆ ಮುಂದಿನ ಪೀಳಿಗೆಗಳಿಗೂ ತಲುಪಬೇಕು.ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ‘ಎಸ್. ಜಾನಕಿ ಸ್ಮಾರಕ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ’ ಸ್ಥಾಪಿಸುವ ಕುರಿತು ಗಂಭೀರ ಚಿಂತನೆ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.

ಜಾನಕಿ ಅವರು ಕೇವಲ ಗಾಯಕಿಯಷ್ಟೇ ಅಲ್ಲ, ಭಾರತೀಯ ಸಂಗೀತ ಲೋಕದ ಅಮೂಲ್ಯ ಸಾಂಸ್ಕೃತಿಕ ಸಂಪತ್ತಾಗಿದ್ದರು. ಅವರ ಸಾವಿರಾರು ಹಾಡುಗಳು ಭಾಷೆ, ಕಾಲ ಮತ್ತು ತಲೆಮಾರುಗಳ ಗಡಿಗಳನ್ನು ಮೀರಿ ಸಂಗೀತ ಪ್ರಿಯರ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದಿವೆ. ಕನ್ನಡ ಚಿತ್ರರಂಗದ ಸುವರ್ಣಯುಗದ ಅನೇಕ ಅಮರ ಗೀತೆಗಳಿಗೆ ಅವರು ತಮ್ಮ ಕಂಠದ ಮೂಲಕ ಜೀವ ತುಂಬಿದ್ದರು ಎಂದು ಸ್ಮರಿಸಿದ್ದಾರೆ.

ಪ್ರಸ್ತಾವಿತ ಕೇಂದ್ರದಲ್ಲಿ ಜಾನಕಿ ಅವರ ಅಪರೂಪದ ಹಾಡುಗಳು, ಸಂದರ್ಶನಗಳು, ಧ್ವನಿಮುದ್ರಣಗಳು, ಸಂಗೀತ ದಾಖಲೆಗಳು ಹಾಗೂ ಸಂಶೋಧನಾ ಸಾಮಗ್ರಿಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಿ ಸಂರಕ್ಷಿಸುವ ಯೋಜನೆ ರೂಪಿಸಲಾಗುವುದು. ಜೊತೆಗೆ ಸಂಗೀತ ವಿದ್ಯಾರ್ಥಿಗಳು, ಸಂಶೋಧಕರು ಹಾಗೂ ಯುವ ಗಾಯಕ-ಗಾಯಕಿಯರಿಗೆ ಅಧ್ಯಯನ ಮತ್ತು ಸಂಶೋಧನೆಗೆ ಅನುಕೂಲವಾಗುವ ರೀತಿಯಲ್ಲಿ ಕೇಂದ್ರವನ್ನು ಅಭಿವೃದ್ಧಿಪಡಿಸುವ ಉದ್ದೇಶವೂ ಇದೆ ಎಂದು ಹೇಳಿದ್ದಾರೆ.

ಎಸ್.ಜಾನಕಿ ಅವರ ಗಾಯನ ಪರಂಪರೆಯನ್ನು ಮುಂದಿನ ಪೀಳಿಗೆಗಳಿಗೆ ತಲುಪಿಸುವುದು ಅವರಿಗೆ ಸಲ್ಲಿಸುವ ನಿಜವಾದ ಗೌರವವಾಗಲಿದೆ. ಅವರ ಧ್ವನಿ ಎಂದೆಂದಿಗೂ ಅಮರವಾಗಿರಲಿದೆ” ಎಂದು ಪ್ರೊ. ಜ್ಞಾನ ಪ್ರಕಾಶ್ ನುಡಿನಮನ ಸಲ್ಲಿಸಿದ್ದಾರೆ…

Spread the love

Related post

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…

Leave a Reply

Your email address will not be published. Required fields are marked *