ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…
- CrimeMysore
- September 6, 2026
- No Comment
- 11
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…
ಮೈಸೂರು,ಸೆ6,Tv10 ಕನ್ನಡ
ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.ಶಾಲೆ ಆವರಣದಲ್ಲಿರುವ ಗೇಟ್ ಗೆ ನೇಣುಬಿಗಿದಿದ್ದರೂ ನೆಲದ ಮೇಲೆ ಕುಳಿತಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.ಮೃತ ಮೇಟಗಳ್ಳಿ ನಿವಾಸಿ ಕೃಷ್ಣಪ್ಪನ ಮಗ ಸಂತೋಷ್ ಎಂದು ಗುರುತಿಸಲಾಗಿದೆ.ಖಾಸಗಿ ಕಾರ್ಖಾನೆಯಲ್ಲಿ ನೌಕರನಾಗಿರುವ ಸಂತೋಷ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.ಕುಟುಂಬಸ್ಥರು ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದು ತೆನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.ಮೇಟಗಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
