ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…
- CrimeMysore
- September 6, 2026
- No Comment
- 10
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…
ಮೈಸೂರು,ಸೆ6,Tv10 ಕನ್ನಡ

ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜೀವ್ ನಗರ ನಿವಾಸಿ ರವಿ(38) ಮೃತ ದುರ್ದೈವಿ.ಮೈಸೂರು ಮೃಗಾಲಯದ ಬಳಿ ಕಬ್ಬನಹಾಲು ವ್ಯಾಪಾರ ಮಾಡುತ್ತಿದ್ದ ರವಿ ಕಳೆದ ಒಂದು ತಿಂಗಳಿಂದ ಕುಡಿತದ ಚಟಕ್ಕೆ ದಾಸನಾಗಿದ್ದ.ಮಧ್ಯರಾತ್ರಿ ಮನೆ ಬಿಟ್ಟ ರವಿ ಕುಡಿದ ಮತ್ತಿನಲ್ಲಿ ಉದ್ಯಾನವನದ ಬೇಲಿ ಹಾರಲು ಮುಂದಾಗಿದ್ದಾನೆ.ಈ ವೇಳೆ ಮೊನಚಾದ ಕಬ್ಬಿಣದ ರಾಡು ತೊಡೆ ಭಾಗಕ್ಕೆ ಚುಚ್ಚಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಬೆಳಿಗ್ಗೆ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ನಜರಬಾದ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ…