ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

  • Politics
  • September 13, 2026
  • No Comment
  • 11

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಹನೂರು Tv10 ಕನ್ನಡ

ಹನೂರು: ಹನೂರು ತಾಲೂಕನ್ನು ಬರಪೀಡಿತ ಎಂದು ಘೋಷಿಸಿ ಒಂದು ತಿಂಗಳಾದರೂ ನಯಾಪೈಸೆ ಬಿಡುಗಡೆ ಮಾಡದೆ ಭ್ರಷ್ಟ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಬಿಜೆಪಿ ಒಬಿಸಿ ಜಿಲ್ಲಾಧ್ಯಕ್ಷ ಹನೂರು ವೆಂಕಟೇಶ್ ಕಿಡಿಕಾರಿದರು.

ತಾಲೂಕಿನ ಕೌದಳ್ಳಿ ಜಿ.ಪಂ ವ್ಯಾಪ್ತಿಯ ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ ಬಳಿಕ ಕೌದಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹನೂರು ಕ್ಷೇತ್ರದಲ್ಲಿ ಸಮರ್ಪಕ ಮಳೆಯಾಗಿಲ್ಲ. ಸರ್ಕಾರ ಮಾರ್ಗಸೂಚಿ ಹೊರಡಿಸಿಲ್ಲ, ಗೋಶಾಲೆ ತೆರೆದಿಲ್ಲ. ಮೇವು-ನೀರಿಲ್ಲದೆ 25ಕ್ಕೂ ಹೆಚ್ಚು ಹಸುಗಳು ಮೃತಪಟ್ಟಿವೆ. ಆದರೆ ಜಿಲ್ಲಾ ಉಸ್ತುವಾರಿ ಹಾಗೂ ಪಶುಸಂಗೋಪನೆ ಸಚಿವ ಪುಟ್ಟರಂಗಶೆಟ್ಟಿ, ಹಸುಗಳು ಮೇವಿಲ್ಲದೆ ಸತ್ತಿಲ್ಲ ಎಂದು ಹೇಳಿಕೆ ನೀಡಿರುವುದು ಹಾಸ್ಯಾಸ್ಪದ ಎಂದು ವಾಗ್ದಾಳಿ ನಡೆಸಿದರು.

ಪಶುಸಂಗೋಪನಾ ಸಚಿವರ ಸ್ವಂತ ಜಿಲ್ಲೆಯಲ್ಲೇ ಹಸುಗಳು ಸಾಯುತ್ತಿದ್ದರೂ ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿಲ್ಲ, ಪರಿಹಾರವನ್ನೂ ನೀಡಿಲ್ಲ ಎಂದರು.

ಕ್ಷೇತ್ರದ 53ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಇದೆ. ಟ್ಯಾಂಕರ್ ಮೂಲಕ ನೀರು ಪೂರೈಕೆಯೂ ಸರಿಯಾಗಿ ಆಗುತ್ತಿಲ್ಲ. ಟ್ಯಾಂಕರ್ ಹಣ ನೀಡಲು ಅನುದಾನವೇ ಇಲ್ಲ ಎಂದು ಪಿಡಿಒ ಒಬ್ಬರು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಇದು ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂಬುದಕ್ಕೆ ಸಾಕ್ಷಿ ಎಂದರು.

ಹೆಲಿಕಾಪ್ಟರ್‌ನಲ್ಲಿ ಬರ ಗೊತ್ತಾಗಲ್ಲ, ನೆಲಕ್ಕಿಳಿದು ನೋಡಿ: ರಾಜ್ಯದ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‌ನಲ್ಲಿ ಕುಳಿತು ಬರ ವೀಕ್ಷಣೆ ಮಾಡುತ್ತಿದ್ದಾರೆ. ಮೇಲಿಂದ ನೋಡಿದರೆ ಬರದ ಬೇಗೆ ಗೊತ್ತಾಗುವುದಿಲ್ಲ. ನೆಲಕ್ಕಿಳಿದು, ಜಮೀನುಗಳಿಗೆ, ಗ್ರಾಮಗಳಿಗೆ ಭೇಟಿ ನೀಡಿ ರೈತರ ಕಷ್ಟ ಆಲಿಸಿದರೆ ಮಾತ್ರ ಮೇವು-ನೀರಿನ ಸಮಸ್ಯೆಯ ಆಳ ಅರ್ಥವಾಗುತ್ತದೆ. ಹೆಲಿಕಾಪ್ಟರ್‌ನಲ್ಲಿ ಮೋಜು-ಮಸ್ತಿ ಮಾಡುತ್ತಾ ಬಡವರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಜಿಲ್ಲೆಯ ಐದು ತಾಲೂಕುಗಳ ಪೈಕಿ ಹನೂರಿನಲ್ಲಿ ತೀವ್ರ ಬರವಿದ್ದರೂ, ಕೇವಲ ಒಂದು ಗ್ರಾಮಕ್ಕೆ ಮಾತ್ರ ಭೇಟಿ ನೀಡಿದ್ದಾರೆ. ಇದು ಬರ ವೀಕ್ಷಣೆಯಲ್ಲ, ಕಾಟಾಚಾರದ ಭೇಟಿ. ಕಾಡಂಚಿನ ಗ್ರಾಮಗಳಿಗೆ ಹೋಗಿದ್ದರೆ ನಿಜವಾದ ಪರಿಸ್ಥಿತಿ ಅರ್ಥವಾಗುತ್ತಿತ್ತು ಎಂದು ಕಿಡಿಕಾರಿದರು.

ಸರ್ಕಾರ ಹೇಳಿದಂತೆ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆಯೂ ಆಗುತ್ತಿಲ್ಲ. ಕಳೆದ ಒಂದು ವಾರದಿಂದ ಬೇಕಾಬಿಟ್ಟಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ಇರುವ ಅಲ್ಪಸ್ವಲ್ಪ ನೀರಿನಲ್ಲಾದರೂ ಬೆಳೆ ಬೆಳೆಯಬೇಕೆಂದರೆ ವಿದ್ಯುತ್ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಒಟ್ಟಾರೆ ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಹರಿಹಾಯ್ದರು.

ಜಿಲ್ಲಾಡಳಿತ ಕೂಡಲೇ ಎಚ್ಚೆತ್ತು ಹನೂರಿನಲ್ಲಿ ಗೋಶಾಲೆ ಆರಂಭಿಸಿ, ಕುಡಿಯುವ ನೀರು ಪೂರೈಸಬೇಕು. ಇಲ್ಲದಿದ್ದರೆ 50 ಸಾವಿರಕ್ಕೂ ಹೆಚ್ಚು ಜನರು ಮತ್ತು ರೈತರೊಂದಿಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹನೂರು ಮಂಡಲ ಪ್ರಭಾರಿ ಹೊನ್ನೂರು ಮಹಾದೇವಸ್ವಾಮಿ, ಜಿಲ್ಲಾ ಉಪಾಧ್ಯಕ್ಷರಾದ ನಟರಾಜು ಗೌಡ ರೇವಣ್ಣ,ಹನೂರು ಮಂಡಲ ಅಧ್ಯಕ್ಷ ವೃಷಬೇಂದ್ರ, ಮಲೆ ಮಹದೇಶ್ವರ ಮಂಡಲ ಅಧ್ಯಕ್ಷ ಮುರುಗೇಶ್ ಯುವ ಮೋರ್ಚಾ ಅಧ್ಯಕ್ಷ ಚಿರಂಜೀವಿ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್, ಹಿರಿಯ ಮುಖಂಡರಾದ ಮಂಗಲಪ್ರಕಾಶ್, ಚಿನ್ನ ಮುತ್ತು, ರವಿ, ಮುನಿಸಿದ್ದ ಶೆಟ್ಟಿ, ಶಿವಣ್ಣ, ಧನಗೆರೆ ಮಹೇಶ್, ಶ್ರಿನಿವಾಸ್, ರಾಧ, ಇನ್ನಿತರರು ಇದ್ದರು.

ವರದಿ :ವಿಜಯ್ ಕುಮಾರ್. ಕಾಂಚಳ್ಳಿ.

Spread the love

Related post

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…

Leave a Reply

Your email address will not be published. Required fields are marked *