ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್
- TV10 Kannada Exclusive
- October 13, 2026
- No Comment
- 6
ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್
ಮೈಸೂರು,ಅ13,Tv10 ಕನ್ನಡ
ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಹಂತೇಶ್ ಎಂಬ ಹೆಸರಿನಲ್ಲಿ ಪೋಸ್ಟ್ ಮಾಡಲಾಗಿದೆ.ನೂರಾರು ಮಂದಿ ಇರುವ ಸ್ಥಳದಲ್ಲಿ ಅನಾಹುತ ಸೃಷ್ಠಿಸುವುದಾಗಿ ಬೆದರಿಕೆ ಸಂದೇಶ ಹಾಕಿದ್ದಾನೆ. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಪೋಸ್ಟ್ ಅಪ್ ಲೋಡ್ ಮಾಡಿರುವ ವ್ಯಕ್ತಿಯ ಬಂಧನಕ್ಕೆ ಜಾಲ ಬೀಸಿದ್ದಾರೆ…