ಲೋಕಾಯುಕ್ತ ಬಲೆಗೆ ಎ.ಸಿ. ಕಚೇರಿ ಸಿಬ್ಬಂದಿ: ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ನೌಕರ!
- TV10 Kannada Exclusive
- November 18, 2026
- No Comment
- 6
ಲೋಕಾಯುಕ್ತ ಬಲೆಗೆ ಎ.ಸಿ. ಕಚೇರಿ ಸಿಬ್ಬಂದಿ: ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ನೌಕರ!
ಬೆಳಗಾವಿ: ಬೆಳಗಾವಿಯ ಉಪವಿಭಾಗಾಧಿಕಾರಿ (ಎ.ಸಿ.) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ಕಚೇರಿ ಸಿಬ್ಬಂದಿಯನ್ನು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ.
37 ಪ್ರಕರಣಗಳನ್ನು ಎ.ಸಿ. ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲು ₹30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾದ ಕಚೇರಿಯ ಎಸ್ಡಿಎ ಸಿಬ್ಬಂದಿ ಪದ್ಮಾಕರ್ ಪಾಟೀಲ್, ₹2 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಈ ಸಂಬಂಧ ಶಂಭುಮ್ ಅಪ್ಪಾರಾವ್ ಎಂಬುವವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿಯ ಎ.ಸಿ. ಕಚೇರಿ ಮೇಲೆ ದಾಳಿ ನಡೆಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಲೋಕಾಯುಕ್ತ ಎಸ್ಪಿ ಪ್ರಸನ್ನ ದೇಸಾಯಿ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ಮುಂದಿನ ತನಿಖೆ ಹಾಗೂ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.