ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

  • Crime
  • August 4, 2022
  • No Comment
  • 336

ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

ಮೈಸೂರು,ಆಗಸ್ಟ್4,Tv10 ಕನ್ನಡ
ಪತ್ನಿಯನ್ನು ಕೊಂದು ನೇಣುಹಾಕಿದ ಪತಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮೈಸೂರಿನ ಐದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ಪಿರಿಯಾಪಟ್ಟಣದ ಚೌತಿ ಗ್ರಾಮದ ಕರಿಯಯ್ಯನ ಪುತ್ರ ಕೆ.ಬಸವರಾಜು ಶಿಕ್ಷೆಗೆ ಗುರಿಯಾದ ಪತಿರಾಯ. ತನ್ನ ಪತ್ನಿ ಮಮತ ಅವರನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದಾನೆ.
ಸೋಮವಾರ ಪೇಟೆಯ ಭುವನಗಿರಿ ಗ್ರಾಮದ ಬಸವರಾಜು ಅವರ ಸೋದರಿ ಮಮತ ಅವರನ್ನು 2002 ರಲ್ಲಿ ಬಸವರಾಜು ವಿವಾಹವಾಗಿದ್ದ. ಮದುವೆ ಬಳಿಕ ವರದಕ್ಷಿಣಿ ತರುವಂತೆ ಪೀಡಿಸುತ್ತಿದ್ದ. ಪರ ಪುರುಷರೊಂದಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನದಿಂದ ಚಿತ್ರ ಹಿಂಸೆ ನೀಡುತ್ತಿದ್ದ.
2012 ರಲ್ಲಿ ಮಮತಗೆ ಬೆಂಕಿ ಹಚ್ಚಿ ಹಿಂಸೆ ನೀಡಿದ್ದ.ಗಾಯಗೊಂಡಿದ್ದ ಮಮತ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. 2019 ರಲ್ಲಿ ಹಣದ ವಿಚಾರವಾಗಿ ಗಲಾಟೆ ಮಾಡಿದ ಬಸವರಾಜು, ಪತ್ನಿ ಮೇಲೆ ಹಲ್ಲೆ ನಡೆಸಿದಲ್ಲದೇ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದು ಕೊಟ್ಟಿಗೆಯಲ್ಲಿ ನೇಣು ಹಾಕುವ ಮೂಲಕ ಕೊಲೆ ಮಾಡಿದ್ದ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪಿರಿಯಾಪಟ್ಟಣ ಠಾಣೆ ಪೊಲೀಸರು,ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅವರು,ಆರೋಪ ಸಾಬೀತಾದ ಹಿನ್ನಲೆಯಲ್ಲಿ ಈ ಶಿಕ್ಷೆ ವಿಧಿಸಿದ್ದಾರೆ.ಸರಕಾರದ ಪರವಾಗಿ ಅಭಿಯೋಜಕರಾದ ನಾಗಪ್ಪ ಸಿ. ನಾಕಮನ್ ವಾದ ಮಂಡಿಸಿದ್ದರು…

Spread the love

Related post

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್ ಮೈಸೂರು,ಅ13,Tv10 ಕನ್ನಡ ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ…
ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…

Leave a Reply

Your email address will not be published. Required fields are marked *