ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

  • Mysore
  • September 16, 2022
  • No Comment
  • 217

ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

ಮೈಸೂರು,ಸೆ16,Tv10 ಕನ್ನಡ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಗೆ ಮೊದಲ ಹಂತದ ಸಿಡಿಮದ್ದಿನ ತಾಲೀಮು ನಡೆದಿದೆ.ಇಂದು ಎರಡನೇ ಹಂತದ ತಾಲೀಮು ನಡೆದಿದೆ.ದಸರಾ ವಸ್ತುಪ್ರದರ್ಶನದ ಪಾರ್ಕಿಂಗ್ ಸ್ಥಳದಲ್ಲಿ ತಾಲೀಮು ನಡೆದಿದೆ. ಫಿರಂಗಿ ಮೂಲಕ ಸಿಡಿಮದ್ದು ಸಿಡಿಸುವ ತಾಲೀಮು ನಡೆಸಲಾಗಿದೆ.ಈಬಾರಿ ಗಜಪಡೆ, ಅಶ್ವಗಳು ವಿಚಲಿತವಾಗದೇ ಪಿರಂಗಿಯಿಂದ ಹೊರಟ ಸಿಡಿಮದ್ದಿನ ಶಬ್ಧಕ್ಕೆ ಹೊಂದಿಕೊಳ್ಳುವ ಮೂಲಕ ತಾಲೀಮು ಯಶಸ್ವಿಗೊಳಿಸಿದೆ.
ಅಕ್ಟೋಬರ್ 5ರಂದು ನಡೆಯಲಿರುವ ವಿಶ್ವವಿಖ್ಯಾತ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಮತ್ತು ಅಶ್ವಾರೋಹಿದಳದ ಕುದುರೆಗಳು ಭಾರೀ ಶಬ್ದಗಳಿಗೆ ಬೆಚ್ಚದಂತೆ ಅವು ಶಬ್ದಗಳಿಗೆ ಹೊಂದಿಕೊಳ್ಳಲು ಅನುಕೂಲವಾಗಲೆಂದು ತಾಲೀಮು ನಡೆಸಲಾಗುತ್ತಿದೆ. ಮೂರು ಸುತ್ತಿನಲ್ಲಿ 21 ಬಾರಿ ಫಿರಂಗಿ ಮೂಲಕ ಸಿಡಿಮದ್ದು ಸಿಡಿಸಲಾಗಿದೆ.
ಸೆ.12ರಂದು ಮೊದಲ ಸಿಡಿಮದ್ದು ಸಿಡಿಸುವ ತಾಲೀಮು ನಡೆದಿತ್ತು. ಆ ವೇಳೆ ಕುದುರೆಗಳು, ಮೂರು ಆನೆಗಳು ಬೆಚ್ಚಿದ್ದವು. ಆದರೆ ಈ ಬಾರಿ ಶಬ್ದಗಳಿಗೆ ಯಾವುದೂ ವಿಚಲಿತವಾಗದೆ ಶಬ್ಧಕ್ಕೆ ಹೊಂದಿಕೊಂಡಿವೆ.ಇಂದು ನಡೆದ ತಾಲೀಮಿನಲ್ಲಿ 12 ಆನೆಗಳು,41 ಕುದುರೆಗಳು ಭಾಗಿಯಾಗಿದ್ದವು.ಸೆ.23 ಕ್ಕೆ ಮೂರನೇ ಸುತ್ತಿನ ತಾಲೀಮು ನಡೆಯಲಿದೆ. ಡಿಸಿಪಿ-3 ಶಿವರಾಜ್ ಮಾತನಾಡಿ ಪ್ರತಿಬಾರಿ ಅರಮನೆ ಬಳಿ ತಾಲೀಮು ನಡೆಯುತ್ತಿತ್ತು. ಅರಮನೆಯ ಗೋಡೆಗಳಿಗೆ ತೊಂದರೆಯಾಗಲಿವೆ ಎನ್ನುವ ಕಾರಣಕ್ಕೆ ಇಲ್ಲಿ ಮಾಡಿದ್ದೇವೆ ಸಿಡಿಮದ್ದು ಒಟ್ಟಾರೆ 92.2ಡೆಸಿಬಲ್ ಎವರೇಜ್ ಇದೆ ಎಂದು ತಿಳಿಸಿದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *