ಮನೆಮನೆಗಳಲ್ಲಿ ಗೊಂಬೆ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಶಾಸಕ ಎಲ್ ನಾಗೇಂದ್ರ

ಮನೆಮನೆಗಳಲ್ಲಿ ಗೊಂಬೆ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಶಾಸಕ ಎಲ್ ನಾಗೇಂದ್ರ

  • Mysore
  • September 23, 2022
  • No Comment
  • 168

ಮನೆಮನೆಗಳಲ್ಲಿ ಗೊಂಬೆ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಶಾಸಕ ಎಲ್ ನಾಗೇಂದ್ರ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022 ರ ಕೆ ಎಂ ಪ್ರವೀಣ್ ಕುಮಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮನೆ ಮನೆಗಳಲ್ಲಿ ದಸರಾ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಿದ್ದು ಅದರ ಪ್ರಚಾರ ಸಾಮಗ್ರಿಗಳನ್ನು
ಬಿ ಎನ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ
ಉದ್ಘಾಟಿಸಿ ನಂತರ ಮಾತನಾಡಿದ
ಶಾಸಕರಾದ ಎಲ್ ನಾಗೇಂದ್ರ
ಸಂಸ್ಕೃತಿಯ ಮತ್ತು ನಮ್ಮ ಪರಂಪರೆಯ ಉಳಿವಿಗಾಗಿ ಹೋರಾಡುವ ಸಂದರ್ಭ ಎದುರಾಗಿದೆ ಪ್ರತಿಯೊಬ್ಬರು ಅದಕ್ಕಾಗಿ ಶ್ರಮಿಸಬೇಕು.ನಮ್ಮ ಸಂಪ್ರದಾಯ ಮತ್ತು ಧಾರ್ಮಿಕತೆಯ ರಕ್ಷಣೆಗಾಗಿ ಪ್ರತಿಯೊಬ್ಬ ಹಿಂದುಗಳು ಒಗ್ಗಟ್ಟಾಗಿ ಕಲೆತು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು ಎಂದು ಕರೆ ನೀಡಿದರು .
ನವರಾತ್ರಿಯು ಮೈಸೂರು ಪರಂಪರೆಯಲ್ಲಿ ಅತ್ಯಂತ ಪವಿತ್ರವಾದದ್ದು ದಸರಾ ಗೊಂಬೆ ಪ್ರದರ್ಶನಕ್ಕೆ ಅತ್ಯಂತ ಮಹತ್ವವಿದೆ .ಪಟ್ಟದ ಗೊಂಬೆಗಳನ್ನು ಲಕ್ಷ್ಮಿನಾರಾಯಣ ಸ್ವರೂಪದಲ್ಲಿ ಪೂಜಿಸಿ ಪುರಾಣ ಪುಣ್ಯಕಥೆಗಳನ್ನು ಗೊಂಬೆಗಳ ಮೂಲಕ ರೂಪಕವಾಗಿ ಪ್ರಚುರಪಡಿಸಿ ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದೇ ಇದರ ಮೂಲ ಉದ್ದೇಶ .ಮೈಸೂರಿನ ಮನೆಮನೆಗಳಲ್ಲಿ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಎಂದರು
ನಂತರ ಮಾತನಾಡಿ ಸ್ಪರ್ಧೆಯ ವಿವರ ನೀಡಿದ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್
ಸ್ಪರ್ಧೆಯಲ್ಲಿ ಸ್ಪರ್ಧೆ ಮಾಡುವವರು 200 ರೂ ನೋಂದಣಿ ಶುಲ್ಕ ಇರುತ್ತದೆ ,
ದಸರಾ ಗೊಂಬೆ ಸ್ಪರ್ಧೆಯು
ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡಂತೆ ಗೊಂಬೆಗಳನ್ನು ಕೂರಿಸಿ ದವರಿಗೆ ಮೊದಲನೇ ಬಹುಮಾನ ಶ್ರೀ ಶ್ರೀ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲೇ 2000 ರೂ ನಗದು ಹಾಗೂ ಪಾರಿತೋಷಕ ಹಾಗೂ ಪ್ರಮಾಣಪತ್ರ ನೀಡಲಾಗುವುದು ಎರಡನೇ ಬಹುಮಾನ 1000 ರೂ ನಗದು
ಪಾರಿತೋಷಕ ಹಾಗೂ ಪ್ರಮಾಣಪತ್ರ,ಮೂರನೇ ಬಹುಮಾನ 500ರೂ ನಗದು
ಪಾರಿತೋಷಕ ಹಾಗೂ
10 ಸ್ಪರ್ಧಿಗಳಿಗೆ ಸಮಾಧಾನಕರ ಬಹುಮಾನ ಹಾಗೂ ಪ್ರಮಾಣಪತ್ರನೀಡಲಾಗುವುದು ಸ್ಪರ್ಧೆಯಲ್ಲಿ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು

ಕಡೆಯ ದಿನಾಂಕ 5/10/2022 ರ ಒಳಗೆ 9880752727ಈ ದೂರವಾಣಿ ಸಂಖ್ಯೆಗೆ ವಾಟ್ಸ್ ಆ್ಯಪ್ ಮೂಲಕ ಗೊಂಬೆ ಜೋಡಣೆ ಮಾಡಿರುವ ಚಿತ್ರ ಹಾಗೂ 3ನಿಮಿಷದ ವೀಡಿಯೊವನ್ನು ಕಲಿಸಿಕೊಡಬೇಕು ಆನಂತರ ನುರಿತ ತೀರ್ಪುಗಾರರು ಅವರ ನಿವಾಸಕ್ಕೆ ತೆರಳಿ ವೀಕ್ಷಿಸಿ ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡ ಅದ್ಭುತವಾಗಿ ಗೊಂಬೆ ಜೋಡಣೆ ಮಾಡಿದಂತಹ ಸ್ಪರ್ಧಿಗಳನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು
ಶಾಸಕರಾದ ಎಲ್ ನಾಗೇಂದ್ರ ,ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ,ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ,ಉಪಾಧ್ಯಕ್ಷರಾದ ಎಸ್ ಎನ್ ರಾಜೇಶ್ ,
ಮೈಸೂರು ಮಹಾನಗರ ಪಾಲಿಕೆ ಉಪಾಯುಕ್ತರು ಅಭಿವೃದ್ಧಿ ಮಹೇಶ್ ,ಕಾರ್ಯಪಾಲಕ ಅಭಿಯಂತರುರಜಿತ್ ಕುಮಾರ್,ಅಭಿವೃದ್ಧಿ ಅಧಿಕಾರಿ ಮಂಜುನಾಥ ,
ಹಾಗೂ ಇನ್ನಿತರರು ಹಾಜರಿದ್ದರು

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *