ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ರವರಿಗೆ ಸಚಿವ ಎಸ್.ಟಿ.ಎಸ್.ರಿಂದ ಅಧಿಕೃತ ಆಹ್ವಾನ…

ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ರವರಿಗೆ ಸಚಿವ ಎಸ್.ಟಿ.ಎಸ್.ರಿಂದ ಅಧಿಕೃತ ಆಹ್ವಾನ…

  • Mysore
  • September 24, 2022
  • No Comment
  • 242

ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ರವರಿಗೆ ಸಚಿವ ಎಸ್.ಟಿ.ಎಸ್.ರಿಂದ ಅಧಿಕೃತ ಆಹ್ವಾನ…

ಮೈಸೂರು,ಸೆ24,Tv10 ಕನ್ನಡ
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್ ರವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅಧಿಕೃತವಾಗಿ ಆಹ್ವಾನಿಸಿದರು. ಮೈಸೂರು ಅರಮನೆಯ ಖಾಸಗಿ ನಿವಾಸದಲ್ಲಿ ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲಪುಷ್ಪ ತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆಹ್ವಾನ ನೀಡಿದರು.ಈ ಸಂಧರ್ಭದಲ್ಲಿ
ಸಂಸದರಾದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯರಾದ ಮಂಜೇಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಜಿ.ರೂಪಾ, , ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪ್ರಮೋದಾದೇವಿ ಒಡೆಯರ್‌ ಅವರಿಗೆ ಸನ್ಮಾನ ಮಾಡಿ, ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನ ನೀಡಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ದಸರಾ ಉತ್ಸವಕ್ಕೆ ವ್ಯವಸ್ಥಿತವಾಗಿ ಸಿದ್ಧತೆಗಳು ನಡೆಯುತ್ತಿದೆ. ದಸರಾ ಉತ್ಸವಕ್ಕೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌ ಅವರನ್ನು ಆಹ್ವಾನಿಸಲಾಯಿತು. ದಸರಾಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಹೇಳಿದ್ದಾರೆ ಎಂದರು.
ಯುವ ದಸರಾಗೆ ನಟ ಕಿಚ್ಚ ಸುದೀಪ್ ಅವರು ಆಗಮಿಸುತ್ತಿಲ್ಲ. ಅನಿವಾರ್ಯ ಕಾರಣಗಳಿಂದ ಫಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.ದಸರಾ ಕಾರ್ಯಕ್ರಮಗಳಲ್ಲಿ ಶಾಸಕ ರಾಮದಾಸ್ ಅವರು ಪಾಲ್ಗೊಳ್ಳುತ್ತಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಮದಾಸ್ ಅವರು ಮೋದಿ ಯುಗ ಉತ್ಸವ ಮಾಡುತ್ತಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.
ದಸರಾ ಸಂಬಂಧ ಪ್ರಚಾರದ ಕೊರತೆ ಆಗಿಲ್ಲ. ಏನಾದರೂ ಸಮಸ್ಯೆ ಇದ್ದರೆ ಪರಿಹರಿಸಲಾಗುವುದು ಪ್ರಚಾರ ಸಮಿತಿ ರಚನೆ ಮಾಡಿದ್ದು ಎಲ್ಲಾ ರೀತಿಯಲ್ಲಿ ಕೆಲಸ ಮಾಡಲಾಗುತ್ತಿದೆ ಎಂದರು.ಸೋಮವಾರ ರಾಷ್ಟ್ರಪತಿಗಳು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ವೇದಿಕೆಯಲ್ಲಿ 13 ಆಸನಗಳಿರಲಿವೆ. ರಾಷ್ಟ್ರಪತಿಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು,
ಆರು ಕೇಂದ್ರ ಸಚಿವರು, ನಾಲ್ವರು ರಾಜ್ಯ ಸಚಿವರು ವೇದಿಕೆಯಲ್ಲಿ ಇರಲಿದ್ದಾರೆ ಎಂದು ತಿಳಿಸಿದರು…

Spread the love

Related post

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್ ಮೈಸೂರು,ಅ13,Tv10 ಕನ್ನಡ ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ…
ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…

Leave a Reply

Your email address will not be published. Required fields are marked *