ರೈತ ದಸರಾ ಉದ್ಘಾಟನೆ…ಎತ್ತಿನಗಾಡಿಯಲ್ಲಿ ಸಾಗಿದ ಸಚಿವಧ್ವಯರು…
- MysoreTV10 Kannada Exclusive
- September 30, 2022
- No Comment
- 129
ಮೈಸೂರು,ಸೆ30,Tv10 ಕನ್ನಡ
ಸಚಿವಧ್ವಯರಿಂದ ಇಂದು ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ರೈತದಸರಾ ಗೆ ಚಾಲನೆ ದೊರೆಯಿತು.ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಚಾಲನೆ ನೀಡಿದರು.ನಂದಿ ಪೂಜೆ ನೆರವೇರಿಸಿ, ನಗಾರಿ ಬಾರಿಸುವ ಮೂಲಕ ಉದ್ಘಾಟನೆ ಮಾಡಲಾಯಿತು. ನಂತರ ಸಚಿವಧ್ವಯರು ಎತ್ತಿನಗಾಡಿಯಲ್ಲಿ ಮೆರವಣಿಗೆಯಲ್ಲಿ ಸಾಗಿ ಅನ್ನದಾತರಿಗೆ ಹುರುಪು ತಂದರು.ಪೂರ್ಣಕುಂಭ, ಗಿರಿಜನ ನೃತ್ಯ, ಕೀಲುಗೊಂಬೆ
ಮಂಗಳವಾದ್ಯ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಪ್ರಕಾರದ ಜಾನಪದ ಕಲಾತಂಡಗಳು ಭವ್ಯ ಮೆರವಣಿಗೆಗೆ ಮೆರುಗು ನೀಡಿದವು.
ಶಾಸಕರಾದ ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದೊಡ್ಡನಾಗಯ್ಯ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು…