ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

  • CrimeNews
  • September 30, 2022
  • No Comment
  • 295

ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ಸೆ30,Tv10 ಕನ್ನಡ :
ಮೈಸೂರು ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.
ಮೈಸೂರು-ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 25 ಸರಗಳ್ಳತನ ಪ್ರಕರಣಗಳನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಪ್ರಕರಣಗಳಿಗೆ ಸಂಭಂಧಿಸಿದಂತೆ
10 ಮಂದಿ ಕುಖ್ಯಾತ ಸರಗಳ್ಳರ ಬಂಧಿಸಿದ್ದಾರೆ.
ಈ ಪೈಕಿ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರು ಸಹ ಇದ್ದಾರೆ.
6 ಮಂದಿ ಆರೋಪಿಗಳು ಪರಸ್ಪರ ರಕ್ತ ಸಂಬಂಧಿಗಳಾಗಿದ್ದಾರೆ.
ರಕ್ತ ಸಂಬಂಧಿಗಳಾಗಿರುವ 6 ಆರೋಪಿಗಳು ಮೂಲತಃ ಚಾಮರಾಜನಗರ ನಿವಾಸಿಗಳಾಗಿದ್ದಾರೆ.
ಹಲವಾರು ವರ್ಷಗಳಿಂದ ಮೈಸೂರಿನ ಹೆಬ್ಬಾಳು ಮತ್ತು ದೇವಯ್ಯನಹುಂಡಿಯಲ್ಲಿ ವಾಸವಾಗಿದ್ದರು.
ಗಾರೆ ಕೆಲಸ, ಸೆಕ್ಯೂರಿಟಿ ಕೆಲಸ ಮಾಡುತ್ತಲೇ ಸರಗಳ್ಳತನದಲ್ಲೂ ಭಾಗಿಯಾಗಿದ್ದರು.
50 ಲಕ್ಷ ಮೌಲ್ಯದ, 1 ಕೆ ಜಿ ತೂಕದಷ್ಟು 25 ಚಿನ್ನದ ಸರಗಳು ಹಾಗೂ ಇತರೇ ಚಿನ್ನಾಭರಣಗಳನ್ನ ವಶಪಡಿಸಿಕೊಳ್ಳಲಾಗಿದೆ.ಕಳವು ಮಾಡಿದ್ದ 2 ದ್ವಿಚಕ್ರ ವಾಹನ ಸೇರಿದಂತೆ ಸರಗಳ್ಳತ‌ನಕ್ಕೆ ಬಳಸಿದ್ದ ಒಟ್ಟು 7 ದ್ವಿಚಕ್ರ ವಾಹನಗಳನ್ನ ವಶ ಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳ ಪೈಕಿ 1ನೇ ಆರೋಪಿ ಈ ಮೊದಲು ಸಹ 27 ಪ್ರಕರಣಗಳಲ್ಲಿ ಭಾಗಿಯಾಗಿದ್ದ.
2 ನೇ ಆರೋಪಿ 4 ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.
ಇಬ್ಬರು ಆರೋಪಿಗಳು ವೃತ್ತಿನಿರತ ಸರಗಳ್ಳರಾಗಿದ್ದಾರೆ.
ಜೈಲುವಾಸ ಅನುಭವಿಸಿ ಹೊರ ಬಂದನಂತರವೂ ತಮ್ಮ ಹಳೆಯ ಚಾಳಿ ಮುಂದುವರಿಸಿರುವುದು ತನಿಖೆಯಲ್ಲಿ ತಿಳಿದು ಬಂದಿದೆ.
ಈ ಕುರಿತು ಮೈಸೂರು ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.ಪತ್ತೆಯಾದ ಆಭರಣಗಳನ್ನ ವಾರಸುದಾರರಿಗೆ ಕೊಡುವ ಪ್ರಕ್ರಿಯೆ ನಡೆದಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *