ರಾಹುಲ್ ಗಾಂಧಿ ಕರ್ನಾಟಕದಲ್ಲಿ ಪಾದಯಾತ್ರೆ ಮಾಡಿದ್ರೆ ಯಾವುದೇ ಪ್ರಯೋಜನವಿಲ್ಲ…ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್…ನಂಜನಗೂಡು,ಸೆ30,Tv10 ಕನ್ನಡ

ರಾಹುಲ್ ಗಾಂಧಿ ಕರ್ನಾಟಕದಲ್ಲಿ ಪಾದಯಾತ್ರೆ ಮಾಡಿದ್ರೆ ಯಾವುದೇ ಪ್ರಯೋಜನವಿಲ್ಲ…ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್…
ನಂಜನಗೂಡು,ಸೆ30,Tv10 ಕನ್ನಡ

ರಾಹುಲ್ ಗಾಂಧಿ ಕರ್ನಾಟಕದಲ್ಲಿ ಪಾದಯಾತ್ರೆ ಮಾಡಿದ್ರೆ ಯಾವುದೇ ಪ್ರಯೋಜನವಿಲ್ಲ…ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್…
ನಂಜನಗೂಡು,ಸೆ30,Tv10 ಕನ್ನಡ
ರಾಹುಲ್ ಗಾಂಧಿ ಕರ್ನಾಟಕದಲ್ಲಿ ಪಾದಯಾತ್ರೆ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ,ಅವರು ಹೆಜ್ಜೆ ಇಟ್ಟ ಕಡೆ ಸೋಲುಗಳೇ ಎದುರಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ್ ವಾಗ್ಧಾಳಿ ನಡೆಸಿದ್ದಾರೆ.
ದಕ್ಷಿಣಕಾಶಿ ನಂಜನಗೂಡಿಗೆ ಭೇಟಿ ನಂಜುಂಡೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಮದವರೊಂದಿಗೆ ಮಾತನಾಡಿದರು.
ಕೇಂದ್ರ ಸರ್ಕಾರವು ಪಿಎಫ್ಐ ಉಗ್ರ ಸಂಘಟನೆಯನ್ನು ಬ್ಯಾನ್ ಮಾಡಿರುವುದು ಸ್ವಾಗತಾರ್ಹ.
ರಾಜ್ಯದಲ್ಲಿಯೂ ಕೂಡ ಪಿಎಫ್ ಐ ಸಂಘಟನೆಯ ಉಗ್ರರು ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿ ಮಾಡಿದ್ದರು.ಹಲವು ವರ್ಷಗಳಿಂದಲೂ ಕೂಡ ಪಿಎಫ್ಐ ಉಗ್ರ ಸಂಘಟನೆಯನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸುತ್ತಾ ಬಂದಿದೆ.ದೇಶ ಮತ್ತು ರಾಜ್ಯದ ಸುರಕ್ಷತೆಗಾಗಿ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿರುವುದು ನಿಜ್ವಾಗ್ಲೂ ಖುಷಿ ತಂದಿದೆ.ಆರ್.ಎಸ್.ಎಸ್.ಬ್ಯಾನ್ ಮಾಡುವಂತೆ ಒತ್ತಾಯಿಸಿದ್ದ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿದ ಸಚಿವ ಡಾ ಅಶ್ವಥ್ ನಾರಾಯಣ್ ಇದು ಹಾಸ್ಯಾಸ್ಪದ ಎಂದರು.ಇದುವರೆಗೂ ರಾಜ್ಯದಲ್ಲಿ ಸಿದ್ದರಾಮಯ್ಯ ಪಿಎಫ್ ಐನಂತಹ ಉಗ್ರ ಸಂಘಟನೆಯನ್ನು ಬೆಂಬಲಿಸುತ್ತ ಬಂದಿರುವವರು.
ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಪಕ್ಷದಲ್ಲಿಯೇ ನಿಲ್ಲಲು ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದರು.

ಹೊರ ರಾಜ್ಯ ಕೇರಳದಿಂದ ಕರ್ನಾಟಕ ರಾಜ್ಯದಲ್ಲಿ ರಾಹುಲ್ ಗಾಂಧಿ ಪಾದಯಾತ್ರೆಯಿಂದ ಯಾವುದೇ ಪ್ರಭಾವ ಇಲ್ಲ.ಕಾಂಗ್ರೆಸ್ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಕಾಲಿಟ್ಟಿರುವವ ಜಾಗದಲ್ಲೆಲ್ಲ ಬರೀ ಸೋಲು ಕಂಡಿದೆ.
ಕರ್ನಾಟಕದಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ ಮಾಡಿದರೆ ಪ್ರಯೋಜನ ಇಲ್ಲ.
ಮುಂಬರುವ ಸಾರ್ವತ್ರಿಕ ಚುನಾವಣೆಗೂ ಯಾವುದೇ ಬದಲಾವಣೆ ಕಾಣುವುದಿಲ್ಲ.
ಕಾಂಗ್ರೆಸ್ ಪಕ್ಷದಲ್ಲಿ ನಾಯಕರುಗಳು ಭಿನ್ನಮತದಿಂದ ಸ್ಪೋಟಗೊಂಡಿದ್ದಾರೆ.
ಮತ್ತೆ ಮುಂಬರುವ ರಾಜ್ಯದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಗೆಲುವು ಸಾಧಿಸಿ ಅಧಿಕಾರ ಹಿಡಿಯುವುದರಲ್ಲಿ ಅನುಮಾನವೇ ಇಲ್ಲ ಎಂದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *