ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಮೈಸೂರು,ಅ3,Tv10 ಕನ್ನಡ
ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಧಂಕಿ ಹಾಕಿದ ಜಂಗಲ್ ಅಂಡ್ ರೆಸಾರ್ಟ್ಸ ನ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ಮೇಲೆ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿ ಅಶೋಕಾ ಪುರಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪಿಎಸ್ಸೈ ಸ್ಮಿತಾ(30) ಎಂಬುವರು ಪ್ರಕರಣ ದಾಖಲಿಸಿದ್ದಾರೆ.ನಿನ್ನೆ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಯುವ ದಸರಾ ಕಾರ್ಯಕ್ರಮದ ಭದ್ರತೆ ಕರ್ತವ್ಯದಲ್ಲಿ ಸ್ಮಿತಾ ನಿಯೋಜನೆಗೊಂಡಿದ್ದರು.ಈ ವೇಳೆ ಜಿಲ್ಲಾ ಉಸ್ತುವಾರಿ ಜೊತೆ ಬಂದ ಬಿಜೆಪಿ ಮುಖಂಡ ಅಪ್ಪಣ್ಣ ರವರನ್ನ ಸೂಚಿಸಿದ ಸ್ಥಳದಲ್ಲಿ ಕುಳಿತುಕೊಳ್ಳುವಂತೆ ಸ್ಮಿತಾ ತಿಳಿಸಿದ್ದಾರೆ.ಈ ವೇಳೆ ಸಹನೆ ಕಳೆದುಕೊಂಡ ಅಪ್ಪಣ್ಣ ಅವ್ಯಾಚ ಶಬ್ದಗಳನ್ನ ಬಳಸಿ ಧಂಕಿ ಹಾಕಿದ್ದಾರೆ.ಅಲ್ಲದೆ ಇವರಜೊತೆ ಬಂದ ಸಹಚರರು ಕೈ ಹಿಡಿದು ಎಳೆದಾಡಿದ್ದಾರೆ.ಈ ವೇಳೆ ಸ್ಮಿತಾ ಅವರ ಜೊತೆ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳು ನೆರವಿಗೆ ಬಂದು ರಕ್ಷಿಸಿದ್ದಾರೆ.ಅವ್ಯಾಚ ಶಬ್ದಗಳಿಂದ ನಿಂದಿಸಿ ಧಂಕಿ ಹಾಕಿದ ಅಪ್ಪಣ್ಣ ಹಾಗೂ ಸಹಚರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಮಿತಾ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *