ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ…ಜಿಂಕೆ ಮಾಂಸ ಸಾಗಿಸುತ್ತಿದ್ದ ಆರೋಪಿಗಳ ಸೆರೆ..‌

ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ…ಜಿಂಕೆ ಮಾಂಸ ಸಾಗಿಸುತ್ತಿದ್ದ ಆರೋಪಿಗಳ ಸೆರೆ..‌

  • Crime
  • October 11, 2022
  • No Comment
  • 202

ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ…ಜಿಂಕೆ ಮಾಂಸ ಸಾಗಿಸುತ್ತಿದ್ದ ಆರೋಪಿಗಳ ಸೆರೆ..‌

ಎಚ್.ಡಿ.ಕೋಟೆ,ಅ11,Tv10 ಕನ್ನಡ ಅಕ್ರಮವಾಗಿ ಜಿಂಕೆ ಭೇಟೆಯಾಡಿ ಬೈಕ್ ನಲ್ಲಿ ಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂಧಿಗಳು ಸೆರೆ ಹಿಡಿದಿದ್ದಾರೆ.
ತಾಲೋಕಿನ ಬಸಾಪುರ ಗ್ರಾಮದ ಪ್ರಸಾದ್ ಮತ್ತು ಮುನಿಯಪ್ಪ ಬಂಧಿತ ಆರೋಪಿಗಳು. ತಲೆ ಮರೆಸಿಕೊಂಡಿರುವ ಇತರ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡ ಅರಣ್ಯ ಇಲಾಖೆ ಸಿಬ್ಬಂಧಿಗಳು ಬಂಧನಕ್ಕೆ ಜಾಲ ಬೀಸಿದ್ದಾರೆ.ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂರಕ್ಷಣಾಧಿಕಾರಿ ಡಾ.ರವೀಶ್ ಕುಮಾರ್ ಮತ್ತು ಹುಲಿ ಸಂರಕ್ಷಿತ ದಳ ಹ್ಯಾಂಡ್ ಪೋಸ್ಟ್ ಮತ್ತು ಹೆಡಿಯಾಲ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಪರಮೇಶ್ ಮಾರ್ಗದರ್ಶನದಲ್ಲಿ ಎನ್.ಬೇಗೂರು ವನ್ಯಜೀನಿ ವಲಯದ ಕಳಸೂರು ಅರಣ್ಯ ತನಿಖಾ ಠಾಣೆ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 8 ಕೆಜಿ ಜಿಂಕೆ ಮಾಂಸದ ಸಮೇತ ದ್ವಿಚಕ್ರವಾಹನವನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಪಪ್ರಕರಣವನ್ನು ಎನ್.ಬೇಗೂರು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಕಾರ್ಯಾಚರಣೆಯಲ್ಲಿ ವಿಶೇಷ ಹುಲಿ ಸಂರಕ್ಷಿತ ದಳ ಪ್ಲಟೂನ್ 02 ಹ್ಯಾಂಡ್ ಪೋಸ್ಟ್ನ ವಲಯ ಅರಣ್ಯಾಧಿಕಾರಿ ಶಿವನಗೌಡ ಎಸ್ ಗೌಡರ್, ಮಹೇಶ್, ಸಿಬ್ಬಂಧಿಗಳಾದ ಚಂದ್ರ,ಪ್ರಕಾಶ್, ಮಧುಸೂಧನ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *