• October 12, 2022

ಜಿಂಕೆ ಮಾಂಸ ಮಾರಾಟ ಆರೋಪಿ ಅನುಮಾನಾಸ್ಪದ ಸಾವು ಪ್ರಕರಣ…ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ…ಸ್ಥಳದಲ್ಲಿ ಬಿಗುವಿನ ವಾತಾವರಣ…

ಜಿಂಕೆ ಮಾಂಸ ಮಾರಾಟ ಆರೋಪಿ ಅನುಮಾನಾಸ್ಪದ ಸಾವು ಪ್ರಕರಣ…ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ…ಸ್ಥಳದಲ್ಲಿ ಬಿಗುವಿನ ವಾತಾವರಣ…

ಜಿಂಕೆ ಮಾಂಸ ಮಾರಾಟ ಆರೋಪಿ ಅನುಮಾನಾಸ್ಪದ ಸಾವು ಪ್ರಕರಣ…ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ…ಸ್ಥಳದಲ್ಲಿ ಬಿಗುವಿನ ವಾತಾವರಣ…

ಎಚ್ ಡಿ ಕೋಟೆ,ಅ12,Tv10 ಕನ್ನಡ
ಜಿಂಕೆ ಮಾಂಸ ಮಾರಾಟ ಮಾಡುತ್ತಿರುವ ಆರೋಪದಡಿ ಬಂಧನವಾಗಿದ್ದ ಆರೋಪಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಹಳ್ಳಿ ಹಾಡಿ ನಿವಾಸಿಗಳು ಆಕ್ರೋಷ ವ್ಯಕ್ತಪಡಿಸಿದ್ದಾರೆ.ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ.ನ್ಯಾಯಕ್ಕಾಗಿ ಹೋರಾಟದ ಹಾದಿ ಹಿಡಿದಿದ್ದಾರೆ. ಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಗುಂಡ್ರೆ ವ್ಯಾಪ್ತಿಯ ಹೊಸಹಳ್ಳಿಹಾಡಿಯಲ್ಲಿ ಅಕ್ರಮ ವಾಗಿ ಜಿಂಕೆ ಬೇಟೆಯಾಡಿ ಮಾಂಸ ಸಾಗಣೆ ಮಾಡಿದ ಆರೋಪದಡಿಯಲ್ಲಿ ಕರಿಯಪ್ಪ ಎಂಬ ವ್ಯಕ್ತಿಯನ್ನು 3ದಿನದ ಹಿಂದೆ ಅರಣ್ಯ ಇಲಾಖೆ ಸಿಬ್ಬಂಧಿಗಳು ವಿಚಾರಣೆ ನೆಪದಲ್ಲಿ ಬಂಧಿಸಿ ಅರಣ್ಯ ವಲಯದ ಕಚೇರಿಗೆ ಕರೆದೊಯ್ದಿದ್ದರು. ಅರಣ್ಯ ಇಲಾಖೆ ವಶದಲ್ಲಿದ್ದ ಕರಿಯಪ್ಪ ಕಳೆದ ರಾತ್ರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ನೀಡಿರುವ ಹಿಂಸೆ ಮತ್ತು ಹಲ್ಲೆಯಿಂದ ಕರಿಯಪ್ಪ ಮೃತಪಟ್ಟಿದ್ದಾರೆಂದು ಆರೋಪಿಸಿದ ಹೊಸಹಳ್ಳಿ ಹಾಡಿಯ ಗ್ರಾಮಸ್ಥರು ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.
ಮಾಹಿತಿ ಅರಿತಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳು ಕಚೇರಿಗೆ ಬೀಗ ಹಾಕಿ ನಾಪತ್ತೆಯಾಗಿದ್ದಾರೆ. ಹೀಗಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಅಂತರಸಂತೆ ಪೋಲಿಸ್ ಠಾಣೆಯ ಸಿಬ್ಬಂದಿ ವರ್ಗ ಅರಣ್ಯ ಕಚೇರಿಗೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾಗಿದ್ದಾರೆ.ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ದ ಆದಿವಾಸಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ…

Spread the love

Leave a Reply

Your email address will not be published.